ಪುತ್ತೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಾಂಚನ ಫೀಡರ್ ಹಾಗೂ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮಾರ ಫೀಡರ್ನಲ್ಲಿ ಡಿ.21ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 6 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಉಪ್ಪಿನಂಗಡಿ ಗ್ರಾಮ ಮತ್ತು ಬಜತ್ತೂರು ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.