





ಪುತ್ತೂರು: ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಅಧ್ಯಕ್ಷರೂ ಮತ್ತು ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರ ಉಪಸ್ಥಿತಿಯಲ್ಲಿ ‘ಪಕ್ಷ ಸಂಘಟನೆಯಲ್ಲಿ ಹಿರಿಯರ ಮಾರ್ಗದರ್ಶನ’ ಎಂಬ ವಿಷಯದಲ್ಲಿ ಹಿರಿಯ ಕಾಂಗ್ರೆಸಿಗರೊಂದಿಗೆ ಸಂವಾದ ಕಾರ್ಯಕ್ರಮವು ಡಿ.21ರಂದು ಬೆಳಿಗ್ಗೆ 10 ಗಂಟೆಗೆ ಎಪಿಎಂಸಿ ರಸ್ತೆಯಲ್ಲಿರುವ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ.


ಈ ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ನಾಯಕರು, ರಾಜ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಲಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಜನಪ್ರತಿನಿಧಿಗಳು, ನಾಮನಿರ್ದೇಶಿತ ಸದಸ್ಯರು, ಕಾರ್ಯಕರ್ತರು ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ತಿಳಿಸಿದ್ದಾರೆ.











