ಪುತ್ತೂರು:ಕಡಬ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪ್ರಾಪ್ತ ಹುಡುಗಿಯ ಅತ್ಯಾಚಾರ ಪ್ರಕರಣದ ಆರೋಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕಳೆದ ಆ.05ರಂದು ಕಡಬ ಪೋಲೀಸ್ ಠಾಣಾ ವ್ಯಾಪ್ತಿಗೊಳಪಟ್ಟ ಅಪ್ರಾಯಸ್ಥ ಯುವತಿ ಮೇಲೆ ಅದೇ ಗ್ರಾಮದ ನಂದನ್ ಎಂ.ಇ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು.ಕಡಬ ಪೊಲೀಸರು ಭಾರತೀಯ ದಂಡ ಸಂಹಿತೆಯ ಕಲಂ 376 (3), 376(2)(N), 506 IPC ಮತ್ತು POCSO ಕಾಯಿದೆಯ 6, 12ರ ಅಡಿಯಲ್ಲಿ ಮೊಕದಮ್ಮೆ ದಾಖಲಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಿದ್ದರು.ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯ ವಿರುದ್ಧ ದೋಷರೋಪಣಾ ಪಟ್ಟಿಯನ್ನು ಕೂಡಾ ದಾಖಲಿಸಲಾಗಿತ್ತು.ಈ ಹಂತದಲ್ಲಿ ಆರೋಪಿಯನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.
ವಿಚಾರಣೆ ನಡೆಸಿದ ದ.ಕ ಜಿಲ್ಲಾ ಐದನೇ ಹೆಚ್ಚುವರಿ ನ್ಯಾಯಾಲಯ ಪುತ್ತೂರು ಇದರ ನ್ಯಾಯಾಧೀಶೆ ಸರಿತಾ ಡಿ.ರವರು ಆರೋಪಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.ಆರೋಪಿ ಪರವಾಗಿ ಸುಳ್ಯದ ವಕೀಲರಾದ ಎಂ.ವೆಂಕಪ್ಪ ಗೌಡ, ಚಂಪಾ ವಿ ಗೌಡ, ರಾಜೇಶ್ ಬಿ.ಜಿ,ಶ್ಯಾಮ್ಪ್ರಸಾದ್ ಎನ್.ಕೆ ಹಾಗೂ ಸಂಜನ್ ಕೋಲ್ಚಾರ್ ವಾದಿಸಿದ್ದರು.