ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಸದಸ್ಯರು ಡಿ.20ರಂದು ದೇವಳದ ತಂತ್ರಿ ಕುಂಟಾರು ರವೀಶ ತಂತ್ರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಪಂಜಿಗುಡ್ಡೆ ಈಶ್ವರ ಭಟ್ ಅವರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಳಿಕ ಸಮಿತಿ ಸದಸ್ಯರೊಂದಿಗೆ ದೇವಳದ ತಂತ್ರಿಯವರನ್ನು ಭೇಟಿ ಮಾಡಿದರು. ನಿತ್ಯ ನೈಮಿತ್ತಿಕ ಮತ್ತು ವಿವಿಧ ವಿಚಾರಗಳ ಕುರಿತ ಮಾತನಾಡಿ, ತಂತ್ರಿಗಳ ಮಾರ್ಗದರ್ಶನ ಪಡೆದರು.
ಈ ಸಂದರ್ಭ ಸಮಿತಿ ಸದಸ್ಯರಾದ ನಳಿನಿ ಪಿ ಶೆಟ್ಟಿ, ಮಹಾಬಲ ರೈ ವಳತ್ತಡ್ಕ, ಈಶ್ವರ ಬೆಡೇಕರ್, ವಿನಯ್ ಕುಮಾರ್, ಸುಭಾಷ್ ರೈ ಬೆಳ್ಳಿಪ್ಪಾಡಿ ಉಪಸ್ಥಿತರಿದ್ದರು.