ಪುತ್ತೂರು:ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ ಮತ್ತು ಕೊಣ್ಣೂರ ವಿಜ್ಞಾನ ಪದವಿಪೂರ್ವ ವಿದ್ಯಾಲಯ, ಯಲ್ಲಟ್ಟಿ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2024-25ನೇ ಸಾಲಿನ ಪದವಿಪೂರ್ವ ವಿದ್ಯಾಲಯಗಳ ರಾಜ್ಯಮಟ್ಟದ ಬಾಲಕಿಯರ ತ್ರೋಬಾಲ್ ಕ್ರೀಡಾಕೂಟದಲ್ಲಿ ದಕ್ಷಿಣಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಯಶ್ವಿ ಡಿ ಶೆಟ್ಟಿ ಇವರು ಭಾಗವಹಿಸಿರುತ್ತಾರೆ.
ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.