ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ಕೋಡಾಜೆ ಬಂಧನ

0

ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಮೊಹಮ್ಮದ್ ಷರೀಫ್(55.ವ) ಅನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಬರುವಾಗ ದೆಹಲಿ ಏರ್​ಪೋರ್ಟ್​ನಲ್ಲಿ ಮೊಹಮ್ಮದ್ ಷರೀಫ್ ಬಂಧಿಸಿದ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಈತನ ಪತ್ತೆಗಾಗಿ ಎನ್​ಐಎ‌ ಅಧಿಕಾರಿಗಳು 5 ಲಕ್ಷ ರೂ. ರಿವಾರ್ಡ್ ಘೋಷಿಸಿದ್ದರು. ಈತ ಪ್ರವೀಣ್ ಕೊಲೆಗೆ ಸಂಚು ರೂಪಿಸುತ್ತಿದ್ದ ತಂಡದಲ್ಲಿದ್ದ. ಜೊತೆಗೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್​ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು.

ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಹಚರರ ಸ್ಥಳಗಳ ಮೇಲೆ ಇತ್ತೀಚೆಗೆ ಎನ್​ಐಎ ದಾಳಿ ಮಾಡಿ ದಾಖಲೆಗಳು ಜಪ್ತಿ ಮಾಡಿಕೊಂಡಿತ್ತು. ಕರ್ನಾಟಕ ಸೇರಿ ತಮಿಳುನಾಡಿನ 16 ಕಡೆ ಎನ್​​​ಐಎ ಅಧಿಕಾರಿಗಳು ದಾಳಿ ಮಾಡಿದ್ದರು.

ಜುಲೈ 26, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದ ಒಂದು ಕೊಲೆ ರಾಜ್ಯದಲ್ಲಿ ಬೆಚ್ಚಿ ಬೀಳಿಸಿತ್ತು. ಹಿಂದು ಪರ ಹೋರಾಟಗಾಗರು ಸ್ವತಃ ಬಿಜೆಪಿ ವಿರುದ್ದ ರೊಚ್ಚಿಗೇಳುವಂತೆ ಆಗಿತ್ತು ಅವತ್ತಿನ ಸ್ಥಿತಿ. ಎನ್​ಐಎ ಪ್ರವೀಣ್ ನೆಟ್ಟಾರು ಕೊಲೆ ಕೇಸ್ ತನಿಖೆ ನಡೆಸುತ್ತಿದ್ದು, 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ದ ಚಾರ್ಶೀಟ್ ಸಲ್ಲಿಕೆ ಮಾಡಿತ್ತು. ಮಹಮ್ಮದ್ ಶರೀಫ್ ಸೇರಿದಂತೆ ಈವರೆಗೆ 20 ಜನರನ್ನು ಬಂಧಿಸಲಾಗಿದೆ.

LEAVE A REPLY

Please enter your comment!
Please enter your name here