ಪುತ್ತೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಜರ ಅವರ ನೇತೃತ್ವದಲ್ಲಿ ಪುತ್ತೂರು ಎಸ್‌ಡಿಪಿಐ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಅಧ್ಯಕ್ಷೆ ಸಜರ ಅವರು ಪ್ರಾಸ್ತಾವಿಕವಾಗಿ ಮಾತಾಡಿದರು. ವಿಮೆನ್ ಇಂಡಿಯಾ ಮೂವ್ಮೆಂಟ್ ಪುತ್ತೂರು ಕ್ಷೇತ್ರ ಉಸ್ತುವಾರಿ ಝಹಿದ ಸಾಗರ್ ಪ್ರಸಕ್ತ ಮಹಿಳೆಯರ ಸನ್ನಿವೇಶದ ಬಗ್ಗೆ ಮಾತನಾಡಿ ಮಹಿಳೆಯರಿಗೆ ಮಾರ್ಗದರ್ಶನ ನೀಡಿದರು. ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಫಾತಿಮಾ ನಿರ್ಮ ಸ್ವಾಗತಿಸಿದರು. ಉಪಾಧ್ಯಕ್ಷೆ ಝರೀನಾ ವಂದಿಸಿದರು. ಸಭೆಯಲ್ಲಿ ಪುತ್ತೂರು ಕ್ಷೇತ್ರ ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಉಪ್ಪಿನಂಗಡಿ ಬ್ರಾಂಚ್ ಪದಾಧಿಕಾರಿಗಳು ಉಪಸ್ಥಿತರಿದ್ದರು.