ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ 2024-25 ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ಅಧ್ಯಕ್ಷತೆಯಲ್ಲಿ ದ.21 ರಂದು ಗ್ರಾಪಂ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ.
ತಾ.ವಿ.ಪು ಕಾರ್ಯಕರ್ತರಾದ ನವೀನ್ ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ನಡೆಸಿಕೊಡಲಿದ್ದು ಕುಂಬ್ರ ಕೆಪಿಎಸ್ ಶಿಕ್ಷಕ ಶಿವಪ್ಪ ರಾಥೋಡ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಲಿದ್ದಾರೆ. ವಿಶೇಷ ಚೇತನ ವ್ಯಕ್ತಿಗಳ ಹಕ್ಕುಗಳ ರಕ್ಷಣೆ, ಸಮಾನ ಅವಕಾಶ ಮತ್ತು ಪೂರ್ಣ ಭಾಗವಹಿಸುವಿಕೆಗಾಗಿ ಹಾಗೂ ವಿಶೇಷ ಚೇತನರ ಕಲ್ಯಾಣ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಈ ಸಭೆ ನಡೆಯಲಿದೆ.ಆದ್ದರಿಂದ ಗ್ರಾಪಂ ವ್ಯಾಪ್ತಿಯ ಎಲ್ಲಾ ವಿಶೇಷ ಚೇತನ ಫಲಾನುಭವಿಗಳು ಮತ್ತು ಪೋಷಕರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ, ಕಾರ್ಯದರ್ಶಿ ಜಯಂತಿ ಮತ್ತು ಸರ್ವ ಸದಸ್ಯರುಗಳು, ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.