ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಆಯ್ಕೆಯಾದ ಸುಭಾಷ್ ರೈ ಬೆಳ್ಳಿಪ್ಪಾಡಿರವರಿಗೆ ರೋಟರಿ ಸ್ವರ್ಣದಿಂದ ಸನ್ಮಾನ

0

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಆಯ್ಕೆಯಾದ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಸದಸ್ಯ ಸುಭಾಷ್ ರೈ ಬೆಳ್ಳಿಪ್ಪಾಡಿರವರನ್ನು ರೋಟರಿ ಸ್ವರ್ಣದ ವತಿಯಿಂದ ಅಭಿನಂದಿಸುವ ಕಾರ್ಯಕ್ರಮ ಡಿ.19ರಂದು ರೋಟರಿ ಮನೀಷಾ ಸಭಾಂಗಣದಲ್ಲಿ ನಡೆಯಿತು.

ಸುಭಾಷ್ ರೈ ಬೆಳ್ಳಿಪ್ಪಾಡಿರವರು ಹಲವಾರು ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ಧಾರ್ಮಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಭಿನಂದನೆಯನ್ನು ಸಲ್ಲಿಸಿ ಮಾತನಾಡಿದ ಕ್ಲಬ್ ಮಾಜಿ ಅಧ್ಯಕ್ಷ ಭಾಸ್ಕರ ಕೋಡಿಂಬಾಳ ಇವರು ಮಾತನಾಡಿ, ಧಾರ್ಮಿಕ ಕ್ಷೇತ್ರದಲ್ಲಿ ಅನುಭವವಿರುವ ನಗುಮುಖದ ಸುಭಾಷ್ ರೈ ಬೆಳ್ಳಿಪ್ಪಾಡಿ ಇವರಿಗೆ ಶ್ರೀ ಮಹಾಲಿಂಗೇಶ್ವರ ದೇವರ ಸೇವೆ ಮಾಡಲು ಅವಕಾಶ ಸಿಕ್ಕಿರುವುದರಿಂದ ನಿಮ್ಮ ಸಮಿತಿಯು ಆಡಳಿತ ಅವಧಿಯಲ್ಲಿ ಶ್ರೀ ಕ್ಷೇತ್ರ ಇನ್ನಷ್ಟು ಅಭಿವೃದ್ದಿಯಾಗಲಿ ಎಂದು ಶುಭ ಹಾರೈಸಿದರು. 

ಅಭಿನಂದನೆಯನ್ನು ಸ್ವೀಕರಿಸಿದ ಸುಭಾಷ್ ರೈ ಬೆಳ್ಳಿಪ್ಪಾಡಿ ಇವರು, ಜವಾಬ್ದಾರಿಯುತ ಸ್ಥಾನದ ಅಧಿಕಾರ ವಹಿಸಿಕೊಂಡ ಈ ಸಂದರ್ಭದಲ್ಲಿ ನಿಮ್ಮೆಲ್ಲರ ಸಲಹೆ ಸೂಚನೆಯನ್ನು ನಮ್ಮ ಸಮಿತಿಗೆ ನೀಡಿ ಎಲ್ಲರೂ ಸಹಕರಿಸುವಂತೆ ಹಾಗೂ ನನ್ನನ್ನು ಈ ಸಂದರ್ಭದಲ್ಲಿ ಅಭಿನಂದಿಸಿರುವುದಕ್ಕೆ ಕ್ಲಬ್‌ಗೆ ಧನ್ಯವಾದವನ್ನು ಸಲ್ಲಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕ್ಲಬ್ ಅಧ್ಯಕ್ಷರಾದ ಸುರೇಶ್ ಪಿ ಮಾತನಾಡಿ, ತಮ್ಮ ಸೇವಾ ಅವಧಿಯಲ್ಲಿ ಭಕ್ತರ ಬೇಡಿಕೆಯಂತೆ ಶ್ರೀ ಕ್ಷೇತ್ರದ ಮೂಲ ಸೌಕರ್ಯ ಅಭಿವೃದ್ಧಿ ಹೊಂದಲ್ಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕ್ಲಬ್ ವಲಯ ಸೇನಾನಿ ವೆಂಕಟರಮಣ ಗೌಡ ಕಳುವಾಜೆ, ಕ್ಲಬ್ ಕಾರ್ಯದರ್ಶಿ ಸೆನೋರಿಟಾ ಆನಂದ್ ಪೂರ್ವಾಧ್ಯಕ್ಷರಾದ ಸುಂದರ ರೈ ಬಲ್ಕಾಡಿ, ಸದಸ್ಯರಾದ ಸುರೇಂದ್ರ ಅಚಾರ್ಯ, ರಾಮಣ್ಣ ರೈ ಕೈಕಾರ, ಪ್ರವೀಣ್ ರೈ ಸಾಂತ್ಯ, ದೀಪಕ್ ಬೊಳ್ವಾರ್, ಕೆ.ಪಿ. ನಾರಾಯಣ ರೈ, ಹಾಗೂ ಗಣೇಶ್ ತಡತ್ತಿಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here