ಮಹಿಳೆಯರು ಆರ್ಥಿಕ ಸ್ವಾವಲಂಬನೆ ಜೊತೆ ಸಮಾಜದಲ್ಲಿ ಬೆರೆಯುವಂತಾಗಬೇಕು: ತ್ರಿವೇಣಿ ಪಲ್ಲತ್ತಾರು
ಪುತ್ತೂರು: ಮಹಿಳೆಯರು ಆರ್ಥಿಕ ಸ್ವಾವಲಂಬನೆಯ ಜೊತೆಯಲ್ಲಿಯೇ ಸಮಾಜದೊಂದಿಗೆ ಬೆರೆಯುವಂತವರಾಗಬೇಕು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಮೂಲಕ ಸಮಾಜದ, ಇಲಾಖೆಯ ಅಂಕುಡೊಂಕುಗಳ ಬಗ್ಗೆ ಪ್ರಶ್ನೆ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು, ಮಹಿಳೆಯರು ಅಬಲೆಯರಲ್ಲ ಎಂಬುದನ್ನು ತೋರಿಸಿಕೊಡಬೇಕು ಎಂದು ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಹೇಳಿದರು.
ಅವರು ದ.19ರಂದು ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆದ ಒಳಮೊಗ್ರು ಗ್ರಾಮ ಪಂಚಾಯತ್ ಮಟ್ಟದ ಅನುಗ್ರಹ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ಒಳಮೊಗ್ರು ಗ್ರಾಪಂ ಮಟ್ಟದ ಸಂಜೀವಿನಿ ಒಕ್ಕೂಟ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದೆ ಎಂದ ತ್ರಿವೇಣಿ ಪಲ್ಲತ್ತಾರುರವರು ಒಕ್ಕೂಟದಿಂದ ಇನ್ನಷ್ಟು ಒಳ್ಳೆಯ ಕೆಲಸಗಳು ಮೂಡಿಬರಲಿ ಎಂದು ಹೇಳಿ ಶುಭ ಹಾರೈಸಿದರು. ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಮತ್ತು ಒಕ್ಕೂಟದ ಅಧ್ಯಕ್ಷೆ ಜಯಶ್ರೀ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಶ್ವಿನಿ ಮತ್ತು ಸುಲೋಚನರವರು ಇಲಾಖೆ ಬಗ್ಗೆ ಹಾಗೂ ಮಹಿಳಾ ಸಬಲೀಕರಣದ ಬಗ್ಗೆ ಮಾಹಿತಿ ನೀಡಿದರು.ಆರೋಗ್ಯ ಇಲಾಖೆಯ ಪ್ರಮೀಳಾರವರು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ತಾಲೂಕು ಸಮನ್ವಯಾಧಿಕಾರಿ ಕಾವ್ಯ ರವರು ಮೆನ್ಸಸ್ ಕಪ್ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ ಸಂದರ್ಬೊಚಿತವಾಗಿ ಮಾತನಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಸದಸ್ಯರುಗಳಾದ ಶೀನಪ್ಪ ನಾಯ್ಕ, ಮಹೇಶ್ ರೈ ಕೇರಿ, ರೇಖಾ ಯತೀಶ್,ಸುಂದರಿ, ಚಿತ್ರಾ, ವನಿತಾ ಕುಮಾರಿ, ಒಕ್ಕೂಟದ ಉಪಾಧ್ಯಕ್ಷೆ ಶಾರದಾ, ಜೊತೆ ಕಾರ್ಯದರ್ಶಿ ಮಲ್ಲಿಕಾ ಎಸ್.ರೈ, ಕೋಶಾಧಿಕಾರಿ ಸುಲೋಚನಾ ಉಪಸ್ಥಿತರಿದ್ದರು. ಒಕ್ಕೂಟದ ನೂತನ ಅಧ್ಯಕ್ಷರಾದ ಗೀತ ಹಾಗೂ ಉಪಾಧ್ಯಕ್ಷೆ ಪದ್ಮಾವತಿ ಇವರಿಗೆ ದಾಖಲೆಗಳ ಹಸ್ತಾಂತರ ಮಾಡಲಾಯಿತು.ಒಕ್ಕೂಟದ ಕಾರ್ಯದರ್ಶಿ ದೀಪಿಕಾ ವಾರ್ಷಿಕ ಮಹಾಸಭೆಯ ವರದಿ ಮತ್ತು ಲೆಕ್ಕಪರಿಶೋಧನಾ ವರದಿ ವಾಚಿಸಿದರು .ಸುನೀತ ಪ್ರಾರ್ಥಿಸಿದರು .ಎಂ ಬಿ ಕೆ ಚಂದ್ರಿಕಾ ಲೋಕೇಶ್ ರೈ ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಸಿಬ್ಬಂದಿಗಳಾದ ಎಲ್ ಸಿ ಆರ್ ಪಿ ಗಳಾದ ಸುನೀತ, ಸವಿತಾ, ಕೃಷಿ ಸಖಿ ಶ್ರೀಮತಿ ಉಷಕುಮಾರಿ ,ಪಶು ಸಖಿ ಸವಿತಾ , ಬ್ಯಾಂಕ್ ಸಖಿ ಚಂದ್ರಕಲಾ, ಕೃಷಿ ಉದ್ಯೋಗ ಸಖಿ ಭಾರತಿಮತ್ತು ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.