ಪುತ್ತೂರು: ನಗರಸಭೆ 2025-26ನೇ ಸಾಲಿನ ಆಯವ್ಯಯ ತಯಾರಿಸಲು ಪೂರ್ವಭಾವಿಯಾಗಿ ಚರ್ಚಿಸಲು ಡಿ.27ರಂದು ಬೆಳಿಗ್ಗೆ ಗಂಟೆ 11ಕ್ಕೆ ಪುತ್ತೂರು ನಗರಸಭೆ ಸಭಾಭವನದಲ್ಲಿ ಸಭೆಯನ್ನು ಕರೆಯಲಾಗಿದೆ.
ಸಭೆಗೆ ಸ್ಥಳೀಯ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗು ಎಲ್ಲಾ ಸಾರ್ವಜನಿಕರು ಭಾಗವಹಿಸಿ ಬಜೆಟ್ ತಯಾರಿಕೆ ಬಗ್ಗೆ ಸಲಹೆ ಸೂಚನೆ ನೀಡುವಂತೆ ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.