ಪುಣಚ: ಪುಣಚ ದೇವಿನಗರ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ಶೈಕ್ಷಣಿಕ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗಗಳಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ಪ್ರತಿಭಾ ಪುರಸ್ಕಾರ ಡಿ.21ರಂದು ನಮೋ ಭಾರತಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಮಾತನಾಡಿ ಶಿಕ್ಷಕರ ಮತ್ತು ಪೋಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ಕಲ್ಪನೆಯೊಂದಿಗೆ ಜ್ಞಾನವನ್ನು ಅಳವಡಿಸಿಕೊಂಡು ಜೀವನದಲ್ಲಿ ಯಶಸ್ಸುನ್ನು ಸಾಧಿಸಬೇಕು ಎಂದು ಶುಭ ಹಾರೈಸಿದರು.
ವಿ.ಹಿಂ.ಪ. ಕಲ್ಲಡ್ ಪ್ರಖಂಡದ ಅಧ್ಯಕ್ಷ ಸಚಿನ್ ಮೆಲ್ಕಾರ್, ಉದ್ಯಮಿ ಯತಿನ್ ಕುಮಾರ್ ಪಂಚವಟಿ ಕಲ್ಲಡ್ಕ ಮಾತನಾಡಿ ಶುಭ ಹಾರೈಸಿದರು.
ಶಾಲಾ ಆಡಳಿತ ಸಮಿತಿ ಸಂಚಾಲಕ ರವೀಶ್ ಪೊಸವಳಿಕೆ, ಸದಸ್ಯ ಈಶ್ವರ ನಾಯ್ಕ ಬೇರಿಕೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಲೋಕೇಶ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ರಜನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಹುಮಾನ ವಿತರಣೆ: ಡಿ.28ರಂದು ನಡೆಯಲಿರುವ 2024-25ನೇ ಸಾಲಿನ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಶಿಶುಮಂದಿರ,ಪ್ರಾಥಮಿಕ, ಪ್ರೌಢಶಾಲಾ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಶಿಕ್ಷಕಿಯರಾದ ದಿವ್ಯ, ವಿನಯ, ದಿವ್ಯ ಎಂ, ಶ್ವೇತಾ, ತಾರಾ, ಶ್ರೀಲಶ್ರೀ, ಶಿಕ್ಷಕರಾದ ರೋಹಿತ್, ವಿನೋದ್ ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು. ಸಂಸ್ಥೆಯಲ್ಲಿ ಕಲಿಕೆ ಹಾಗೂ ಕ್ರೀಡೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ದಿನೇಶ್, ಶಿಕ್ಷಕಿ ತಾರಾ ಪಟ್ಟಿ ವಾಚಿಸಿದರು. ಅತಿಥಿ ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕ ಪ್ರಸನ್ನ ಸ್ವಾಗತಿಸಿ, ಶಿಕ್ಷಕಿ ದೀಕ್ಷಾ ವಂದಿಸಿದರು. ಶಿಕ್ಷಕಿ ಚಿತ್ರಾ ಕಾರ್ಯಕ್ರಮ ನಿರೂಪಿಸಿದರು.