ಪುತ್ತೂರು: ಎಲೆಕ್ಟ್ರಿಕ್ ಆಟೋ ರಿಕ್ಷಾವೊಂದು ಬೈಪಾಸ್ ರಸ್ತೆ ಉರ್ಲಾಂಡಿಯಲ್ಲಿ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಸೂರ್ಯ ಎಂಬವರು ಮೃತಪಟ್ಟ ಘಟನೆ ಡಿ.22 ರಂದು ಬೆಳಗ್ಗೆ ನಡೆದಿದೆ.
ಬೈಪಾಸ್ ರಸ್ತೆ ಉರ್ಲಾಂಡಿಯಲ್ಲಿ ಚಾಲಕ ಸೂರ್ಯ ಅವರು ಚಲಾಯಿಸುತ್ತಿದ್ದ ರಿಕ್ಷಾಕ್ಕೆ ನಾಯಿಯೊಂದು ಅಡ್ಡ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ರಿಕ್ಷಾ ಪಲ್ಟಿಯಾಗಿದೆ.
ಗಂಭೀರ ಗಾಯಗೊಂಡ ಚಾಲಕ ಸೂರ್ಯ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂಧಿಸದೆ ಅಲ್ಲಿ ಅವರು ಮೃತಪಟ್ಟಿದ್ದಾರೆ.ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.