ಪುತ್ತೂರು: ಅವಕಾಶಗಳನ್ನು ಧನಾತ್ಮಕವಾಗಿ ಸ್ವೀಕರಿಸಿದವರು ಜೀವನದಲ್ಲಿ ಸಾಧಕರಾಗುತ್ತಾರೆ ಮತ್ತು ಜೀವನೋತ್ಸಾಹದಿಂದ ಇರುತ್ತಾರೆ ಎಂದು ಜೇಸಿ ತರಬೇತುದಾರ ವಸಂತ ವೀರಮಂಗಲ ನುಡಿದರು. ಅವರು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಸಂಭ್ರಮ ಶನಿವಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳ ಜೊತೆ ವ್ಯಕ್ತಿತ್ವ ವಿಕಸನ ಕುರಿತಾಗಿ ಮಾತನಾಡಿದರು. ಅನೇಕ ಉದಾಹರಣೆಗಳು ನಮ್ಮನ್ನು ತೊಡಗಿಸಿಕೊಳ್ಳಲು ಅವಕಾಶ ನೀಡಿದೆ. ಹಾಗಾಗಿ ನಮ್ಮಲ್ಲಿ ಇಚ್ಛಾಶಕ್ತಿ ಕೊರತೆಯಾಗ ಬಾರದು ಎಂದು ನುಡಿದರು. ವೇದಿಕೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ರವಿಚಂದ್ರ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಾಬಲ ರೈ ಶಾಲಾ ಮುಖ್ಯಗುರು ತಾರಾನಾಥ ಸವಣೂರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕರಾದ ಹರಿಣಾಕ್ಷಿ, ಶೋಭಾ,ಶ್ರೀಲತಾ,ಹೇಮಾವತಿ,ಕವಿತಾ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗೋಪಾಲಕೃಷ್ಣ, ಎಸ್ ಡಿ ಎಂ ಸಿ ಸದಸ್ಯರಾದ ಹರೀಶ್,ರಮೇಶ್, ಪೋಷಕರಾದ ಪಾರೂಕ್, ಮನೋಜ್, ಸುಮಿತ್ರಾ ಸಲೀಮ್,ವೆಂಕಟರಮಣ, ಆನಂದ ಗೌಡ, ಉಪಸ್ಥಿತರಿದ್ದರು. ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.