ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ದ.24 ರಂದು ಪೂರ್ವಾಹ್ನ ಗಂಟೆ 10.30ಕ್ಕೆ ಕುಂಬ್ರ ನವೋದಯ ರೈತ ಸಭಾಭವನದಲ್ಲಿ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮೆಸ್ಕಾಂ ಗ್ರಾಮಾಂತರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಶಿವಶಂಕರ್ರವರು ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ನಡೆಸಿಕೊಡಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ದಿಗೆ ಸೂಕ್ತ ಸಲಹೆಗಳನ್ನು ನೀಡಿ , ಸರಕಾರದ ಸವಲತ್ತುಗಳನ್ನು ಪಡೆಯಲು ಅರ್ಜಿ ಸಲ್ಲಿಸುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ, ಕಾರ್ಯದರ್ಶಿ ಜಯಂತಿ ಕೆ ಹಾಗೂ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.