ಪುತ್ತೂರು: ಕುಂಬ್ರ ವರ್ತಕರ ಸಂಘದ ವತಿಯಿಂದ ಕಸದ ಬುಟ್ಟಿಗಳನ್ನು ಕೊಡುಗೆಯಾಗಿ ದ.21 ರಂದು ವಿತರಿಸಲಾಯಿತು.
ಒಳಮೊಗ್ರು ಗ್ರಾಮ ಪಂಚಾಯತ್ಗೆ 2 ಕಸದ ಬುಟ್ಟಿ, ಕುಂಬ್ರ ಶ್ರೀ ರಾಮ ಭಜನಾ ಮಂದಿರಕ್ಕೆ ಹಾಗೂ ಶೇಖಮಲೆ ಮಸೀದಿಗೆ ತಲಾ ಒಂದೊಂದು ಕಸದ ಬುಟ್ಟಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಮೋನಪ್ಪ ಪೂಜಾರಿ ಬಡಕ್ಕೋಡಿ, ಶೇಖಮಲೆಯ ಮಸೀದಿಯ ಅಧ್ಯಾಪಕರಾದ ಉಸ್ಮಾನ್ ಮುಸ್ಲಿಯಾರ್ರವರು ಕೊಡುಗೆಯನ್ನು ಸ್ವೀಕರಿಸಿದರು. ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್ರಾಯ, ಸ್ಥಾಪಕ ಅಧ್ಯಕ್ಷ ಶ್ಯಾಮ್ಸುಂದರ ರೈ ಕೊಪ್ಪಳ, ಪ್ರಧಾನ ಕಾರ್ಯದರ್ಶಿ ಭವ್ಯ ರೈ, ಕೋಶಾಧಿಕಾರಿ ಸಂಶುದ್ದೀನ್ ಎ.ಆರ್, ಮಾಜಿ ಅಧ್ಯಕ್ಷರಾದ ನಾರಾಯಣ ಪೂಜಾರಿ ಕುರಿಕ್ಕಾರ, ಎಸ್.ಮಾಧವ ರೈ ಕುಂಬ್ರ, ಮಾಜಿ ಉಪಾಧ್ಯಕ್ಷ ರಾಜೇಶ್ ರೈ ಪರ್ಪುಂಜ, ಸದಸ್ಯ ಹನೀಫ್ ಭಾರತ್ ಮತ್ತಿತರರು ಉಪಸ್ಥಿತರಿದ್ದರು.