ಪುತ್ತೂರು: ಅರಿಯಡ್ಕ ಗ್ರಾಮದ ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ದ.28ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಇದರ ಅಂಗವಾಗಿ ಶಾಲಾ ವಾರ್ಷಿಕ ಕ್ರೀಡಾಕೂಟ ದ.24ರಂದು ಬೆಳಿಗ್ಗೆ ನಡೆಯಲಿದೆ. ಡೆಕ್ಕನ್ ಏರ್‌ಲೈನ್ಸ್ ಬೆಂಗಳೂರು ಇದರ ಚಂದ್ರಶೇಖರ ಗೌಡ ಕ್ರೀಡಾಕೂಟ ಉದ್ಘಾಟಿಸಲಿದ್ದು ರಾಜೀವ ರೈ ಕುತ್ಯಾಡಿ ಧ್ವಜಾರೋಹಣ ಮಾಡಲಿದ್ದಾರೆ. ಪ್ರೌಢ ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್‌ರವರ ಸಭಾಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಪರಾಹ್ನ ಸಮಾರೋಪ ಸಮಾರಂಭ ನಡೆಯಲಿದೆ. ಪೋಷಕರು, ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಲಾಭಿವೃದ್ಧಿ ಸಮಿತಿ ಮತ್ತು ಶಾಲಾ ಮುಖ್ಯಗುರು ಮತ್ತು ಶಿಕ್ಷಕ ವೃಂದ, ಹಿರಿಯ ವಿದ್ಯಾರ್ಥಿ ವೃಂದದ ಪ್ರಕಟಣೆ ತಿಳಿಸಿದೆ.