ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸಂಸ್ಥೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿಯವರ 60ನೇ ಹುಟ್ಟುಹಬ್ಬವನ್ನು ಶಾಲಾ ಶಿಕ್ಷಕವೃಂದ ಮತ್ತು ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಸಿಬ್ಬಂದಿಗಳು ಆಚರಿಸಿದರು.
ಕಾವು ಹೇಮನಾಥ ಶೆಟ್ಟಿಯವರಿಗೆ ಹುಟ್ಟುಹಬ್ಬದ ಪ್ರಯುಕ್ತ ಗೌರವಾರ್ಪಣೆ ಮಾಡಲಾಯಿತು. ಬಳಿಕ ಮಾತನಾಡಿದ ಕಾವು ಹೇಮನಾಥ ಶೆಟ್ಟಿಯವರು ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪ್ರೀತಿ, ಶುಭ ಹಾರೈಕೆಗಳು ನನ್ನ ಜೀವನಕ್ಕೆ ಹೊಸ ಚೈತನ್ಯ ತಂದಿದೆ, ನನಗೆ ವಿದ್ಯಾರ್ಥಿಗಳ ಸಮ್ಮುಖದಲ್ಲಿ ದೊರೆತಿರುವ ಈ ಹುಟ್ಟುಹಬ್ಬ ಆಚರಣೆ ಖುಷಿ ನೀಡಿದೆ ಎಂದರು.
ಶಾಲೆಯ ಆಡಳಿತ ಸಮಿತಿಯ ಸದಸ್ಯರುಗಳಾದ ಸಾಜ ರಾಧಾಕೃಷ್ಣ ಆಳ್ವ, ದಯಾನಂದ ರೈ ಮನವಳಿಕೆ ಗುತ್ತು, ಜಯಪ್ರಕಾಶ್ ರೈ, ನೂಜಿಬೈಲು, ನಿತ್ಯಾನಂದ ಶೆಟ್ಟಿ ಮನವಳಿಕೆ ಗುತ್ತು, ರಮೇಶ್ ರೈ ಸಾಂತ್ಯ, ವಾಣಿ ಶೆಟ್ಟಿ ನೆಲ್ಯಾಡಿ, ರವಿಪ್ರಸಾದ್ ಶೆಟ್ಟಿ ಬನ್ನೂರು, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮೀ ಪ್ರಾಸ್ತಾವಿಕವಾಗಿ ಮಾತನಾಡಿದರು, ಶಿಕ್ಷಕಿ ಗಾಯತ್ರಿ ಸ್ವಾಗತಿಸಿ, ಸಂಧ್ಯಾ ವಂದಿಸಿದರು.