ಪುತ್ತೂರು : ನಮ್ಮ ಮುಂದಿನ ಪೀಳಿಗೆಗೆ ದೈವದ ನೆಲೆ, ಕಾರಣಿಕವನ್ನು ಪರಿಚಯಿಸುವ ಕಾರ್ಯ ನಮ್ಮಿಂದಾಗಬೇಕು ಎಂದು ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು.
ಅವರು ದ. 23 ರಂದು ಸವಣೂರು ಗ್ರಾಮದ ಆರೆಲ್ತಡಿ ಉಳ್ಳಾಕುಲ ಮತ್ತು ಕೆಡೆಂಜೊಡಿತ್ತಾಯಿ ದೈವಗಳ ನೂತನ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಆಶಿರ್ವಚನ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಮಾತನಾಡಿದರು.
ಶಾಸಕಿ ಭಾಗೀರಥಿ ಮುರುಳ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಎಸ್‌ಆರ್‌ಕೆ ಲ್ಯಾಡರ್ಸ್ ಮಾಲಕ ಕೇಶವ ಅಮೈ, ಗುತ್ತಿಗೆದಾರ ಕರೋಡಿ ಗೋಪಾಲಕೃಷ್ಣ ಬೋರ್ಕರ್ ಶುಭ ಹಾರೈಸಿದರು. ನಿವೃತ್ತ ಬ್ಯಾಂಕ್ ಉದ್ಯೋಗಿ ಮಿಜಾರುಗುತ್ತು ರಾಜೇಂದ್ರ ರೈ, ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಮನಾ ಮುರಳಿಮೋಹನ ಶೆಟ್ಟಿ, ಗೌರವ ಸಲಹೆಗಾರರಾದ ಪ್ರಕಾಶ್ಚಂದ್ರ ರೈ ಮುಗೇರುಗುತ್ತು, ನವೀನ್ ಕುಮಾರ್ ಶೆಟ್ಟಿ ಮಗೇರುಗುತ್ತು ಮತ್ತಿತರರು ಉಪಸ್ಥಿತರಿದ್ದರು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಿನೇಶ್ ಮೆದು ಸ್ವಾಗತಿಸಿದರು. ಗೌರವಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕಿನಾರ ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪಟ್ಟೆ ವಂದಿಸಿದರು. ಗೌರವ ಸಲಹೆಗಾರ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.