ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

0

ಪುತ್ತೂರು: ಕ್ರೀಡೆಯು ಒಂದು ಪ್ರಮುಖ ಚಟುವಟಿಕೆಯಾಗಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾಳಜಿ ವಹಿಸಲು ಮತ್ತು ಅವರಲ್ಲಿ ಆರೋಗ್ಯಕರ ಸ್ಪರ್ಧೆಯ ಪ್ರಜ್ಞೆಯನ್ನು ಬೆಳೆಸಲು ಇದನ್ನು ಕೈಗೊಳ್ಳಬೇಕು.ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿದೆ. ಇಂತಹ ಸಮರ್ಥ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು. ಎಂದು ಎಸ್.ಜಿ.ಎಂ. ಪ್ರೌಢಶಾಲೆ ಸರ್ವೆ ಇದರ ನಿವೃತ್ತ ಶಿಕ್ಷಕರಾದ ಶ್ರೀನಿವಾಸ ಹೆಚ್.ಬಿ. ಇವರು ಹೇಳಿದರು.


ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2024-25 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ,ಅವರು ಮಾತನಾಡಿದರು.ಕ್ರಮಬದ್ಧವಾದ ರೀತಿಯಲ್ಲಿ ಜೀವನವನ್ನು ಕಾಪಾಡಿಕೊಳ್ಳಲು ನಮ್ಮ ದೇಹವು ಬಹಳ ಮುಖ್ಯವಾದಂತೆಯೇ ನಮ್ಮ ದೇಹದ ಸಂಪೂರ್ಣ ಬೆಳವಣಿಗೆಗೆ ವ್ಯಾಯಾಮವೂ ಬಹಳ ಮುಖ್ಯ.ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ನಮ್ಮ ದೇಹವು ಉತ್ತಮ ವ್ಯಾಯಾಮವನ್ನು ಪಡೆಯುತ್ತದೆ.ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಇದು ಬಹಳ ಮುಖ್ಯವಾಗಿದೆ. ದೈಹಿಕ ವ್ಯಾಯಾಮವು ಸ್ವಯಂ ಶಿಸ್ತು ,ಇತರರಿಗೆ ಗೌರವ ಅಥವಾ ನಾಯಕತ್ವದ ಕೌಶಲ್ಯಗಳಂತಹ ಅಗತ್ಯ ಮೌಲ್ಯಗಳ ಮತ್ತೊಂದು ಸರಣಿಯನ್ನು ಉತ್ತೇಜಿಸುತ್ತದೆ.ತಂಡದಲ್ಲಿ ಕೆಲಸ ಮಾಡುವ ಒಂದು ಉತ್ತಮ ಅವಕಾಶವನ್ನು ಕ್ರೀಡೆಯು ಒದಗಿಸುತ್ತದೆ.ಎಂದು ಹೇಳಿದರು. ವಿದ್ಯಾರ್ಥಿಗಳ ವಿವಿಧ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು.ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.


ಜಿಲ್ಲಾ ,ರಾಜ್ಯ ಮತ್ತು ರಾಷ್ಟ್ರಮಟ್ಟದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾಜ್ಯೋತಿಯನ್ನು ತರುವುದರ ಮೂಲಕ ಕಾರ‍್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕಾರ‍್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.


ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯರವರು ಮಾತನಾಡುತ್ತಾ ವಿದ್ಯಾರ್ಥಿಗಳಲ್ಲಿ ಕ್ರೀಡೆಯು ಸ್ನೇಹ ಮತ್ತು ಒಗ್ಗಟ್ಟಿನ ಭಾವನೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸದ ಜೊತೆಗೆ ಸುಧಾರಣೆ,ಸಾಧನೆ ಮತ್ತು ವೈಯಕ್ತಿಕ ಪ್ರಗತಿಯ ಭಾವನೆಗಳನ್ನು ಬೆಳೆಯುವುದರಿಂದ ಉತ್ತಮ ಮತ್ತು ಉಜ್ವಲ ಭವಿಷ್ಯಕ್ಕೆ ಸಾಕ್ಷಿಯಾಗುತ್ತದೆ.ಎಂದು ಹೇಳಿದರು.


ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಸಂತೋಷ ಬಿ. ಉಪಸ್ಥಿತರಿದ್ದರು. ಈ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ,ಕೆನರಾ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ಕಾರ್ತಿಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಮನೋಹರ್ ಎನ್., ರವರು ಸಹಕರಿಸಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಉಪನ್ಯಾಸಕರಾದ ರೇಖಾ ವಂದಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಆಶಿಕಾ ರಾವ್ ಕಾರ‍್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here