ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದ ಕೆದಿಲ (ಗಡಿಯಾರ ) ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ 7 ಡೆಸ್ಕ್ ಮತ್ತು 7 ಬೆಂಚನ್ನು ವಿತರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಯ ಪುಟ್ಟ ರಂಗನಾಥ ಮತ್ತು ಅಧ್ಯಾಪಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಇಬ್ರಾಹಿಂರವರಿಗೆ ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾರವರು ವಿತರಿಸಿದರು.
ಈ ಸಂದರ್ಭದಲ್ಲಿ ಕೆದಿಲ “ಬಿ” ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿ, ಉಪಾಧ್ಯಕ್ಷ ಸುಂದರ, ಸೇವಾ ಪ್ರತಿನಿಧಿ ಜಯಂತಿ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕೆದಿಲದ ಸದಸ್ಯರಾದ, ಜಗದೀಶ, ಗಿರೀಶ ಉಪಸ್ಥಿತರಿದ್ದರು.