ಕುಟ್ರುಪ್ಪಾಡಿ: ಅಮೃತ ಸರೋವರ ಕೆರೆಗೆ ಬಾಗಿನ ಸಮರ್ಪಣೆ, ನಾಮಫಲಕ ಅನಾವರಣ, ಕೆರೆ ಹಸ್ತಾಂತರ

0

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಇದರ ವತಿಯಿಂದ 2023-24ನೇ ಸಾಲಿನಲ್ಲಿ ನಮ್ಮೂರು ನಮ್ಮ ಕೆರೆ ಯೋಜನೆಯಡಿಯಲ್ಲಿ ಪುನಶ್ಚೇತನಗೊಂಡಿರುವ ಕಡಬ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಹಳೆಸ್ಟೇಷನ್ ಎಂಬಲ್ಲಿರುವ ಅಮೃತ ಸರೋವರ ಕೆರೆಗೆ ಬಾಗಿನ ಸಮರ್ಪಣೆ, ನಾಮಫಲಕ ಅನಾವರಣ, ಕೆರೆ ಹಸ್ತಾಂತರ ಕಾರ್ಯಕ್ರಮ ಡಿ.24ರಂದು ನಡೆಯಿತು.


ಪುತ್ತೂರು ತಾ.ಪಂ.ಮಾಜಿ ಅಧ್ಯಕ್ಷೆ ಪುಲಸ್ತ್ಯ ರೈ ಅವರು ಅಮೃತ ಸರೋವರ ಕೆರೆಗೆ ಬಾಗಿನ ಸಮರ್ಪಣೆ ಮಾಡಿದರು. ಪುನಶ್ಚೇತನಗೊಂಡಿರುವ ಅಮೃತ ಸರೋವರ ಕೆರೆಯ ನಾಮಫಲಕ ಅನಾವರಣವನ್ನು ಕುಟ್ರುಪ್ಪಾಡಿ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಸುಮನಾ ರವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪರಿಷತ್ ಮಾಜಿ ಸದಸ್ಯರಾದ ಸೈಯ್ಯದ್ ಮೀರಾಸಾಹೇಬ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸೈಯ್ಯದ್ ಮೀರಾ ಸಾಹೇಬ್ ಅವರು ಕೆರೆ ಕಾಮಗಾರಿಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಡಿರುವುದು ಶ್ಲಾಘನೀಯ ಕಾರ್ಯ. ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರಿಂದ ಕೆರೆಯನ್ನು ಉಳಿಸಿ ಅಭಿವೃದ್ಧಿಗೊಳಿಸುವ ಕಾರ್ಯವಾಗಬೇಕೆಂದು ಹೇಳಿದರು.


ಕೆರೆ ಸಮಿತಿ ಅಧ್ಯಕ್ಷರಾದ ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ದ.ಕ. ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್‌ರವರು ಕೆರೆ ಜವಾಬ್ದಾರಿಯನ್ನು ಕುಟ್ರುಪ್ಪಾಡಿ ಗ್ರಾಮ ಪಂಚಾಯತ್‌ಗೆ ಹಸ್ತಾಂತರಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.


ಕುಟ್ರುಪ್ಪಾಡಿ ಗ್ರಾ.ಪಂ.ಉಪಾಧ್ಯಕ್ಷೆ ಯಶೋದಾ, ಕೆರೆ ಸಮಿತಿ ಉಪಾಧ್ಯಕ್ಷ ಶಿವಪ್ರಸಾದ ಮೈಲೇರಿ, ಕಡಬ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ ಸವಣೂರು, ಕಡಬ ತಾಲೂಕು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟ ಸಮಿತಿ ಅಧ್ಯಕ್ಷ ಸಂತೋಷ್ ಕೆ, ಕುಟ್ರುಪ್ಪಾಡಿ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ನಾಗಣ್ಣಗೌಡ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕಡಬ ವಲಯ ಒಕ್ಕೂಟಗಳ ಅಧ್ಯಕ್ಷ ರಮೇಶ್ ರೈ, ಕಡಬ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಪ್ರಶಾಂತ್ ಎನ್.ಎಸ್., ಕುಟ್ರುಪ್ಪಾಡಿ ಗ್ರಾ.ಪಂ.ಸದಸ್ಯರು, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಕಡಬ ವಲಯ ಜನ ಜಾಗೃತಿ ವೇದಿಕೆ ಸದಸ್ಯರು, ತಾಲೂಕು ಕೃಷಿ ಮೇಲ್ವಿಚಾರಕ ಸೋಮೇಶ್, ಕಡಬ ವಲಯ ಮೇಲ್ವಿಚಾರಕ ವಿಜೇಶ್ ಜೈನ್, ವಲಯದ ಸೇವಾ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ಎನ್., ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕುಟ್ರುಪ್ಪಾಡಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಆನಂದ ಎ., ವಂದಿಸಿದರು. ಬಿಳಿನೆಲೆ ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here