ಪುತ್ತೂರು: ಸಂಪ್ಯ ಉದಯಗಿರಿಯಲ್ಲಿನ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಡಿ.27ರಿಂದ ಜ.3ರ ತನಕ ನಡೆಯಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಡಿ.26ರಂದು ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ನಡೆಯಲಿದೆ.
ಸಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆಯೂ ಮುಖ್ಯರಸ್ತೆಯಾಗಿ ಸಂಪ್ಯ ಶ್ರೀ ಕ್ಷೇತ್ರಕ್ಕೆ ತೆರಳಲಿದೆ ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.