ಪುತ್ತೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ಇವರು ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಬಂದಿರುತ್ತದೆ. ಶಾಲೆಯ ಒಟ್ಟು 40 ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿದ್ದಾರೆ. ಹೈಯರ್ ವಿಭಾಗದಲ್ಲಿ ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 15 ವಿದ್ಯಾರ್ಥಿಗಳು ಅತ್ಯುತ್ತಮ (ಡಿಸ್ಟಿಂಕ್ಷನ್) ಶ್ರೇಣಿಯಲ್ಲಿ, 05 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಲೋವರ್ ವಿಭಾಗದಲ್ಲಿ ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಕು. ಸಾಯೀಶ್ವರಿ ಡಿ ಇವಳು ವಿಶಿಷ್ಠ ಶ್ರೇಣಿಯೊಂದಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಉಳಿದಂತೆ 6 ವಿದ್ಯಾರ್ಥಿಗಳು ಅತ್ಯುತ್ತಮ (ಡಿಸ್ಟಿಂಕ್ಷನ್) ಶ್ರೇಣಿಯಲ್ಲಿ, 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಮತ್ತು ಸುಂದರ್ ಇವರು ತರಬೇತಿ ನೀಡಿದ್ದಾರೆ.
ಹೈಯರ್‌ಗ್ರೇಡ್ (ವಿಶಿಷ್ಠ ಶ್ರೇಣಿ ಪಡೆದ ವಿದ್ಯಾರ್ಥಿಗಳು)