puttur: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಸರಣಿ ಕಾರ್ಯಕ್ರಮ ನೃತ್ಯಾಂತರಂಗದ 118ನೇ ಸರಣಿ ಕಾರ್ಯಕ್ರಮದಲ್ಲಿ ಸಂಸ್ಥೆಯ ಗ್ರಾಮೀಣ ಶಾಖೆಯಾದ ಕೊಕ್ಕಡದ ಐವರು ವಿದ್ಯಾರ್ಥಿಗಳಾದ ಚಿರಂತನ, ಹೃದ್ಯ, ಅರ್ಚನಾ , ವರ್ಷಾ ಮತ್ತು ಶ್ರೀಹಿತ ಇವರು ಭರತನಾಟ್ಯ ಕಾರ್ಯಕ್ರಮ ಇತ್ತೀಚೆಗೆ ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದ ಅಭ್ಯಾಗತರಾದ ಸಂಗೀತ ಗುರು ಪದ್ಮಾವತಿ ಬಾಳ್ತಿಲ್ಲಾಯ ಶುಭ ಹಾರೈಸಿದರು. ಕಾರ್ಯಕ್ರಮದ ಹಿಮ್ಮೇಳದಲ್ಲಿ ನಟುವಾಂಗದಲ್ಲಿ ಗುರು ದೀಪಕ್ ಕುಮಾರ್ , ಹಾಡುಗಾರಿಕೆಯಲ್ಲಿ ವಿದುಷಿ ಪ್ರೀತಿಕಲಾ, ಮೃದಂಗದಲ್ಲಿ ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಮತ್ತು ಕೊಳಲಿನಲ್ಲಿ ವಿದ್ವಾನ್ ಕೃಷ್ಣಗೋಪಾಲ್ ಪುಂಜಾಲಕಟ್ಟೆ ಕಾರ್ಯಕ್ರಮಕ್ಕೆ ಮೆರಗು ನೀಡಿದರು. ಶಶಿಪ್ರಭಾ ಮತ್ತು ವಿದ್ವಾನ್ ಗಿರೀಶ್ ಕುಮಾರ್ ಸಹಕರಿಸಿದ್ದರು.