ಪುತ್ತೂರು: ಷಣ್ಮುಖದೇವ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವು ದ.24ರಂದು ನಡೆಯಿತು. ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ತೀರ್ಥಾನಂದ ದುಗ್ಗಳ ಅಧ್ಯಕ್ಷತೆಯಲ್ಲಿ ನಡೆಯಿತು.
ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, “ಪ್ರಶಾಂತ ವಾತಾವರಣದಲ್ಲಿರುವ ಈ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳು ಧನ್ಯರು. ಉತ್ತಮ ಶಿಕ್ಷಣ ಪಡೆದು ಮೌಲ್ಯಗಳನ್ನು ನಿಮ್ಮ ಜೀವನದಲ್ಲಿ ರೂಢಿಸಿಕೊಂಡು ಮುಂದೆ ಸಮಾಜದ ಸತ್ಪ್ರಜೆಗಳಾಗಿ ” ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಮುಖ್ಯ ಅತಿಥಿ ಕೊಳ್ತಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಮೋದ್ ಕೆ ಎಸ್ ಮಾತನಾಡಿ”ಊರ ಪರವೂರ ದಾನಿಗಳ ಸಹಕಾರದಿಂದ ಶಾಲೆಗಳು ಬೆಳೆಯಬೇಕು. ಸರ್ಕಾರದ ಅನುದಾನಗಳು ,ವಿದ್ಯಾಭಿಮಾನಿಗಳೆಲ್ಲರೂ ಜೊತೆಯಲ್ಲಿ ಈ ಶಾಲೆಯ ಪ್ರಗತಿಗೆ ಶ್ರಮಿಸೋಣ “ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಮಾತನಾಡಿ”ಮಕ್ಕಳೇ,ಹತ್ತನೇ ತರಗತಿಯ ಫಲಿತಾಂಶ ಜೀವನದ ಅವಿಭಾಜ್ಯ ಅಂಗ ಚೆನ್ನಾಗಿ ಓದಿ ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ “ಎಂದು ಶುಭ ಹರಸಿದರು.
ಶಾಲೆಯ ಸಂಚಾಲಕ ಶಿವರಾಮ ಭಟ್ ಬೀರ್ಣಕಜೆ ಸ್ವಾಗತಿಸಿದರು. ಖಜಾಂಚಿ ದಿವಾಕರ ರೈ ಕೆರೆಮೂಲೆ ವಂದಿಸಿದರು.ಮುಖ್ಯಗುರು ಕೃಷ್ಣವೇಣಿ ವರದಿ ವಾಚಿಸಿದರು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಉಪವಲಯ ಅರಣ್ಯಾಧಿಕಾರಿ ಸೌಮ್ಯಾ ಎ ಜೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ”ಮಕ್ಕಳೇ, ಉತ್ತಮ ಗುರಿಯನ್ನು ಇಟ್ಟುಕೊಂಡು ಸಾಧನೆ ಮಾಡಿ,ನಿಮ್ಮ ಭವಿಷ್ಯ ಉಜ್ವಲವಾಗಲಿ”ಎಂದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ರೇವತಿ ಮಕ್ಕಳಿಗೆ ಶುಭ ಹರಸಿದರು.
ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ವಸಂತ್ ಕುಮಾರ್ ರೈ ದುಗ್ಗಳ, ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಶುಭಹಾರೈಸಿದರು. ಶಾಲಾ ಆಡಳಿತ ಮಂಡಳಿಯ ನಿರ್ದೇಶಕರುಗಳು, ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು,ಊರ ಪರವೂರ ಗಣ್ಯರು,ವಿದ್ಯಾಭಿಮಾನಿಗಳು, ಕೊಡುಗೈ ದಾನಿಗಳು,ಪೋಷಕ ವೃಂದ, ಶಾಲೆಯ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಶಾಲಾ ಆಡಳಿತ ಮಂಡಳಿಯ ನಿರ್ದೇಶಕ ಸೀತಾರಾಮ ಅಮಳ ವಂದಿಸಿದರು. ಶಿಕ್ಷಕಿ ಭವ್ಯಾ ಕಾರ್ಯಕ್ರಮ ನಿರೂಪಿಸಿದರು.