ವಿಶ್ವಬ್ರಾಹ್ಮಣ ಸೇವಾ ಸಂಘದ ಮಹಾಸಭೆ

0

ಪುತ್ತೂರು: ವಿಶ್ವ ಬ್ರಾಹ್ಮಣ ಸೇವಾ ಸಂಘ ಬೊಳುವಾರು ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.೨೨ರಂದು ಅಪಹಾಹ್ನ ಬೊಳುವಾರು ವಿಶ್ವಕರ್ಮ ಸಭಾ ಭವನದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಶ್ರೀಧರ ಆಚಾರ್ಯ ಕೊಕ್ಕಡ ಮಾತನಾಡಿ, ಸಂಘದ ಪೂರ್ವಾಧ್ಯಕ್ಷ ಮಾರ್ಗದರ್ಶನದಲ್ಲಿ ಸಂಘವು ಮುನ್ನಡೆಯುತ್ತಿದೆ. ಸಭಾಂಗಣಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸುಂದರಗೊಳಿಸಲಾಗಿದೆ. ಸಂಘದ ಬೆಳವಣಿಗೆಯಲ್ಲಿ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದ ಅವರು ಸಂಘದ ಬೆಳವಣಿಗೆಯಲ್ಲಿ ಮುಂದೆಯೂ ಸಹಕರಿಸುವಂತೆ ವಿನಂತಿಸಿದರು.
ಉಪಾಧ್ಯಕ್ಷ ಅಣ್ಣಿ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತೀಕ್ಷಾರವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿವಿಧ ವಿಶ್ವಕರ್ಮ ಸಂಘ ಸಂಸ್ಥೆಗಳ ಪ್ರಮುಖರನ್ನು ಗೌರವಿಸಲಾಯಿತು.
ಸಂಘದ ಉಪಾಧ್ಯಕ್ಷ ಎಸ್. ಭುಜಂಗ ಆಚಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ಆನಂದ ಆಚಾರ್ಯ ಅಜ್ಜಿನಡ್ಕ ವರದಿ ವಾಚಿಸಿದರು. ಕೋಶಾಧಿಕಾರಿ ಎಸ್.ವಸಂತ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಸದಸ್ಯ ಕಿಶನ್ ಬಿ.ವಿ ಕಾರ್ಯಕ್ರಮ ನಿರೂಪಿಸಿ, ಮಹಿಳಾ ಮಂಡಳಿ ಅಧ್ಯಕ್ಷೆ ಇಂದಿರಾ ಪುರುಷೋತ್ತಮ ಆಚಾರ್ಯ ವಂದಿಸಿದರು.

LEAVE A REPLY

Please enter your comment!
Please enter your name here