ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಗೆ ಪುತ್ತೂರು ಬಿಜೆಪಿಯಿಂದ ಸ್ವಾಗತ

0

ಪುತ್ತೂರು: ಖಾಸಗಿ ಕಾರ್ಯಕ್ರಮದ ನಿಮಿತ್ತ ಡಿ.26ರಂದು ರಾತ್ರಿ ಪುತ್ತೂರಿಗೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಪುತ್ತೂರು ಬಿಜೆಪಿಯಿಂದ ನೆಹರುನಗರದಲ್ಲಿ ಸ್ವಾಗತಿಸಲಾಯಿತು.

ಪುತ್ತೂರಿನಲ್ಲಿ ಸುಪ್ರೀಂ ಕೋರ್ಟಿನ ಅಡಿಷನಲ್ ಸೋಲಿಸಿಟರ್ ಜನರಲ್ ಕೆ.ಎಮ್ ನಟರಾಜ್ ಅವರ ನೂತನ ಮನೆಗೆ ಅವರು ಆಗಮಿಸುವ ಸಂದರ್ಭ ಬಿಜೆಪಿ ಕಾರ್ಯಕರ್ತರು ನೆಹರುನಗರದಲ್ಲಿ ಅವರನ್ನು ಹೂವಿನ ಹಾರ ಹಾಕಿ ಸ್ವಾಗತಿಸಿದರು.

ತುಸು ಹೊತ್ತು ಬಿಜೆಪಿ ಕಾರ್ಯಕರ್ತರನ್ನು ಪರಿಚಯ ಮಾಡಿಕೊಂಡು ಕಾರ್ಯಕರ್ತರ ಅಪೇಕ್ಷೆಯಂತೆ ಪೊಟೋ ಕ್ಲಿಕ್ಕಿಸಿಕೊಂಡು ತಾನೆ ಸೆಲ್ಫಿ ತೆಗೆಸಿ ಕೊಟ್ಟರು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರಾಜ್ಯಾಧ್ಯಕ್ಷರ ಜೊತೆಯಲ್ಲಿದ್ದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು, ನಗರ ಮಂಡಲದ ಅಧ್ಯಕ್ಷ ಶಿವ ಕುಮಾರ್ ಕಲ್ಲಿಮಾರು, ಮುರಳಿಕೃಷ್ಣ ಹಸಂತಡ್ಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here