ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ-ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

0

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ನಿಧನರಾದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ (92) ಅವರು ಇಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು. ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್‌ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.

LEAVE A REPLY

Please enter your comment!
Please enter your name here