ಪುತ್ತೂರು: ಕೊಳ್ತಿಗೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಪಂಚಾಯತ್ ಹಂತದ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವು ಪಂಚಾಯತ್ ಅಧ್ಯಕ್ಷೆ ಅಕ್ಕಮ್ಮ ಇವರ ಅಧ್ಯಕ್ಷತೆಯಲ್ಲಿ ಡಿ.26ರಂದು ನಡೆಯಿತು.
ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರ ಆಪ್ತ ಸಮಾಲೋಚಕಿ (ಕೆನರಾ ಬ್ಯಾಂಕ್ ) ಗೀತಾ ವಿಜಯ್ ಇವರು ಗ್ರಾಮಸ್ಥರಿಗೆ ಬ್ಯಾಂಕ್ ಗಳಲ್ಲಿರುವ ಯೋಜನೆಗಳ ಬಗ್ಗೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಮಾಹಿತಿ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ, ಅಟಲ್ ಪಿಂಚಣಿ ಯೋಜನೆಗಳ ನೋಂದಣಿ ಕಾರ್ಯಕ್ರಮವನ್ನೂ ನಡೆಸಿದರು.
ಪವನ್ ಡಿ.ಜಿ ದೊಡ್ಡಮನೆ,ಪೆರ್ಲಂಪಾಡಿ ಯೂನಿಯನ್ ಬ್ಯಾಂಕ್ ಶಾಖಾ ಪ್ರಬಂಧಕ ಅಪ್ಪಯ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ .ಎಚ್.ಟಿ.,ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಎಮ್.ಬಿ.ಕೆ, ಹಾಗೂ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ಮದರ ಸಂಸ್ಥೆ ರೋಣ ಇದರ ಗೀತಾ ಸಿ.ಎಪ್ .ಎಲ್ ಕಾರ್ಯಕ್ರಮದ ನಿರೂಪಣೆ ಮಾಡಿದರು.