ಪುತ್ತೂರು: ಬೈಪಾಸು ರಸ್ತೆಯಿಂದ ಬಪ್ಪಳಿಗೆ ಬಲ್ನಾಡಿಗೆ ಹೋಗುವ ರಸ್ತೆಯಲ್ಲಿ ನಗರೋತ್ಥಾನ ಹಂತ -4 ರಡಿ ಕಿರು ಸೇತುವೆ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಓಡಾಡುವ ವಾಹನಗಳು ಪಕ್ಕದಲ್ಲಿ ತಾತ್ಕಾಲಿಕವಾಗಿ ಪರ್ಯಾಯ ರಸ್ತೆಯನ್ನು ಬಳಸುವಂತೆ ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.
ಡಿ.28ರಿಂದ ಕಾಮಗಾರಿ ಆರಂಭಗೊಳ್ಳಲಿದೆ. ಈ ಸಂದರ್ಭ ಪಕ್ಕದಲ್ಲಿ ತಾತ್ಕಾಲಿಕವಾಗಿ ಪರ್ಯಾಯ ರಸ್ತೆಯನ್ನು ನಿರ್ಮಿಸಲಾಗಿದೆ. ಸಾರ್ವಜನಿಕರು ಸದರಿ ರಸ್ತೆಯನ್ನು ಉಪಯೋಗಿಸುವಂತೆ ತಿಳಿಸಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತ ಮಧು ಎಸ್ ಮನೋಹರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.