ಪುತ್ತೂರು: ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ – ಮಾಲಕ ಸಂಘದ 27ನೇ ವರ್ಷದ ವಾರ್ಷಿಕ ಮಹಾಸಭೆಯು ಡಿ.28ರಂದು ಮಧ್ಯಾಹ್ನ ಗಂಟೆ 2.30ಕ್ಕೆ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಜರುಗಲಿದೆ.
ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಾಪ್ರಭಾ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸ್ನೇಹ ಸಂಗಮ ಪುತ್ತೂರು ಇದರ ಗೌರವಾಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಗೌರವ ಸಲಹೆಗಾರ ಜೋಕಿಂ ಡಿಸೋಜಾ, ಕಾನೂನು ಸಲಹೆಗಾರ ಹರಿಣಾಕ್ಷಿ ಜೆ ಶೆಟ್ಟಿಯವರು ಗೌರವ ಉಪಸ್ಥಿತಿಯಲ್ಲಿರುತ್ತಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎಸ್.ಐ ಉದಯರವಿ, ನಗರ ಪೊಲೀಸ್ ಠಾಣೆ ಎಸ್.ಐ ಆಂಜನೇಯ ರೆಡ್ಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಚ್.ವಿಶ್ವನಾಥ ಅಜಿಲ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸನ್ಮಾನ:
ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುಭಾಸ್ ರೈ ಕಡಮಜಲು ಮತತ್ತು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಕ್ಸೋಪೋನ್ ವಾದಕ ಪಿ.ಕೆ ಗಣೇಶ್ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾಕತಜ್ಞ ಹರೀಶ್ ಭಟ್ ಕೇಪುಳು ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಸಂಘದ ಸದಸ್ಯರ ಮಕ್ಕಳಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ಪ್ರತಿಭಾ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಇದರ ಜೊತೆಗೆ ವಾರ್ಷಿಕ ಮಹಾಸಭೆಯಲ್ಲಿ ಹಾಜರಿರುವ ಸದಸ್ಯರುಗಳಿಗೆ ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಇಸ್ಮಾಯಿಲ್ ಬೊಳ್ವಾರ್ ಅವರು ತಿಳಿಸಿದ್ದಾರೆ.