ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಸನ್ನಿಧಿಯಲ್ಲಿ ಶ್ರೀ ಅಯ್ಯಪ್ಪ ದೀಪಾರಾಧನೆ – ಅಭಿಷೇಕ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿಯ ಗುಡಿಯಲ್ಲಿ ಡಿ.27ರಂದು ಶ್ರೀ ಅಯ್ಯಪ್ಪ ದೀಪಾರಾಧನೆ ಕಾರ್ಯಕ್ರಮವನ್ನು ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ವೇ ಮೂ ಶ್ರೀಧರ ತಂತ್ರಿಯವರು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿಸಿದರು.


ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆದ ಬಳಿಕ ಶ್ರೀ ಅಯ್ಯಪ್ಪ ದೇವರ ಸನ್ನಿಧಿಯಲ್ಲಿ ಗಣಪತಿ ಹೋಮ ನಡೆಯಿತು. ಬಳಿಕ ಶ್ರೀ ಅಯ್ಯಪ್ಪ ಸ್ವಾಮಿಯ ಶಿಲಾಬಿಂಬಕ್ಕೆ ತುಪ್ಪ, ಜೇನು ತುಪ್ಪ, ಭಸ್ಮ, ಶ್ರೀಗಂಧ, ಹರಸಿನ, ಎಳನೀರು, ಅಕ್ಕಿ ಹುಡಿ, ಶುದ್ಧಜಲ, ಪುಷ್ಪಾಭಿಷೇಕಗಳು ನಡೆದವು. ಮಧ್ಯಾಹ್ನ ಸರ್ವಾಲಂಕೃತ ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ನಡೆಯಿತು. ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.

ದೇವಳದ ಅರ್ಚಕ ಹರೀಶ್ ಭಟ್‌ರವರು ತಂತ್ರಿಗಳಿಗೆ ಸಹಕರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ದಿನೇಶ್ ಪಿ.ವಿ, ವಿನಯ ಸುವರ್ಣ, ಮಹಾಬಲ ರೈ ವಳತ್ತಡ್ಕ, ನಳಿನಿ ಪಿ ಶೆಟ್ಟಿ, ಸುಭಾಷ್ ರೈ ಬೆಳ್ಳಿಪ್ಪಾಡಿ, ಈಶ್ವರ್ ಬೇಡೆಕರ್, ಪ್ರಧಾನ ಅರ್ಚಕರೂ ಸದಸ್ಯರೂ ಆಗಿರುವ ವೇ ಮೂ ವಸಂತ ಕೆದಿಲಾಯ, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಅಯ್ಯಪ್ಪ ಸಮಿತಿಯ ಮಾದವ ಸ್ವಾಮಿ, ಅಯ್ಯಪ್ಪ ಮಾಲಾಧಾರಿಗಳಾದ ಶಬರಿ ಅಯ್ಯಪ್ಪ ಭಕ್ತವೃಂದದ ದೇವಾನಂದ, ಕರುಣಾಮಯಿ ಭಕ್ತವೃಂದದ ಮನೋಜ್, ಪ್ರಭಾಕರ್, ರಾಮಣ್ಣ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here