ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಇದರ ಸಾರಥ್ಯದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ದ್ವಿತೀಯ ಬಾರಿಗೆ ಡಿ.28 ಮತ್ತು 29 ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಡಿ.27ರಂದು ಸಂಜೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ವೈಭವದಿಂದ ನಡೆಯಿತು.
ತಾಲೂಕಿನ ವಿವಿಧ ಗ್ರಾಮಗಳಿಂದ ಬರುವ ಹೊರೆಕಾಣಿಕೆಯು ದರ್ಬೆಗೆ ಬಂದು ಅಲ್ಲಿಂದ ಜೊತೆಯಾಗಿ ಮೆರವಣಿಗೆಯು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಗೆ ಬಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಹಸಿರುವಾಣಿಯನ್ನು ಸಂಗ್ರಹಿಸಿ ಇಡಲಾಯಿತು. ಸಂಜೆ ದರ್ಬೆಯಲ್ಲಿ ಹಸಿರುವಾಣಿ ಮೆರವಣಿಗೆಯನ್ನು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿನಯ ಸುವರ್ಣ ಮತ್ತು ಕುಂಟಾರು ಬ್ರಹ್ಮಶ್ರೀ ಗುರು ತಂತ್ರಿಯವರು ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಉಗ್ರಾಣ ಮುಹೂರ್ತವನ್ನು ಬ್ರಹ್ಮಶ್ರೀ ಗುರುತಂತ್ರಿಯವರು ನೇರವೇರಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ವಿಶ್ವನಾಥ ನಾಯಕ್ ಮತ್ತು ದೇವಣ್ಣಕಿಣಿ ಸಂಸ್ಥೆಯ ವಿಜಯಣ್ಣ ದೀಪ ಪ್ರಜ್ವಲಿಸಿದರು.
ಈ ಸಂದರ್ಭ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಗೌರವಾಧ್ಯಕ್ಷರಾದ ಶಶಾಂಕ್ ಕೊಟೆಚಾ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಸಹ ಸಂಚಾಲಕ ಮನೀಶ್ ಕುಲಾಲ್, ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು, ಕಾರ್ಯದರ್ಶಿ ಗಣೇಶ್‌ಚಂದ್ರ ಭಟ್ ಮಕರಂದ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಜೊತೆಕಾರ್ಯದರ್ಶಿ ಹರೀಶ್ ಮರುವಾಳ, ಸಂತೋಷ್ ಕುಮಾರ್ ಮುಕ್ರಂಪಾಡಿ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ, ಕೋಶಾಧಿಕಾರಿ ಉದಯ ಕುಮಾರ್ ರೈ ಎಸ್.ಸಂಪ್ಯ, ಸ್ವಾಗತ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ, ಸಂಚಾಲಕ ಅನಿಲ್ ತೆಂಕಿಲ, , ಕಾರ್ಯದರ್ಶಿಗಳಾದ ಗಣೇಶ್ಚಂದ್ರ ಭಟ್, ಪ್ರವೀಣ್ ಶೆಟ್ಟಿ ತಿಂಗಳಾಡಿ ಕೃಷ್ಣಪ್ರಸಾದ್ ಶೆಟ್ಟಿ, ಉಮೇಶ್ ವೆಜಿಟೇಬಲ್, ಪ್ರವೀಣ್ ಭಂಡಾರಿ, ನಿಶಾಂತ್ ರೈ, ಪ್ರಕಾಶ್, ನವೀನ್ ಪಡಿವಾಳ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.