ಪುತ್ತೂರು: ಸಾಯಿಕಲಾ ಯಕ್ಷಬಳಗದಿಂದ ಡಾ|ಶಿವರಾಮ ಕಾರಂತ ಬಾಲವನದಲ್ಲಿ ಯಕ್ಷಗಾನ ನಾಟ್ಯ ತರಬೇತಿ

0

ಪುತ್ತೂರು: ಸಾಯಿಕಲಾ ಯಕ್ಷಬಳಗ ಡಾ|ಶಿವರಾಮ ಕಾರಂತ ಬಾಲವನದ ಯಕ್ಷಗಾನ ನಾಟ್ಯ ತರಬೇತಿ ಡಿ.22 ರಂದು ಪುತ್ತೂರಿನ ಡಾ| ಶಿವರಾಮ ಕಾರಂತ ಬಾಲವನದಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮರಾಠಿ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಅಶೋಕ್ ನಾಯ್ಕ್ ಕೆದಿಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಸದಸ್ಯ ಕೃಷ್ಣಪ್ಪ ಪೂಜಾರಿ, ಕಿನ್ಯ ಭಾಗವಹಿಸಿದರು.

ಪ್ರಸಕ್ತ ಪ್ರಾರ್ಥನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಯಕ್ಷಗಾನ ಕಲಾವಿದ ಬಾಲಸುಬ್ರಹ್ಮಣ್ಯ ಭಟ್ ಗುತ್ತಿಗಾರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ಸಾಯಿ ಕಲಾ ಯಕ್ಷ ಬಳಗದ ಸಂಚಾಲಕರಾದ ಪ್ರೇಮ ಕಿಶೋರ್ ಪ್ರಸ್ತಾವನೆ ನುಡಿಗಳನ್ನಾಡಿದರು. ಜ್ಯೋತಿ ಅಶೋಕ್ ಅತಿಥಿಗಳನ್ನು ಸ್ವಾಗತಿಸಿದರು. ವರ್ಷ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಅನನ್ಯ ಲಕ್ಷ್ಮಿ ವಂದಿಸಿದರು. ಶ್ರೀ ಸಾಯಿ ಕಲಾ ಯಕ್ಷ ಬಳಗದ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here