ಪುತ್ತೂರು: ಗ್ರಾಮ ಪಂಚಾಯತ್ ಧರ್ಮಸ್ಥಳ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಕಲ್ಲಾರೆ ಇದರ ಸಹಯೋಗದಲ್ಲಿ ಉಚಿತ ಫೂಟ್ ಫಲ್ ಥೆರಪಿ ಶಿಬಿರವು ಡಿ.15ರಿಂದ 30ರವರೆಗೆ ಏರ್ಪಡಿಸಲಾಗಿದ್ದು, ಡಿ.27ರಂದು ಮಾಹಿತಿ ಕಾರ್ಯಾಗಾರವು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಟಲ್ ಜೀ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮನೋಹರ್ ರಾವ್ ಕನ್ಯಾಡಿ ಮತ್ತು ನಾರಾಯಣ ಧರ್ಮಸ್ಥಳ ಹಾಗೂ ವಿಠಲ ಶೆಟ್ಟಿ ಜೊತೆಗೂಡಿ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.
ಕಾರ್ಯಾಗಾರದ ಅಧ್ಯಕ್ಷತೆಯನ್ನು ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ವಹಿಸಿದ್ದರು. ಶಿಬಿರಾರ್ಥಿಗಳಿಗೆ ಸೀತಾರಾಮ್ ಶೆಟ್ಟಿಯವರು ಆರೋಗ್ಯ ರಕ್ಷಣೆ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿದರು.
ವೇದಿಕೆಯಲ್ಲಿ ಧರ್ಮಸ್ಥಳ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್, ಕಾರ್ಯನಿರ್ವಹಣಾಧಿಕಾರಿ ಶಶಿಧರ್, ಗ್ರಾ.ಪಂ. ಅಧ್ಯಕ್ಷೆ ವಿಮಲ, ಪಂ.ಅ. ಅಧಿಕಾರಿ ದಿನೇಶ್, ಪುತ್ತೂರು ಕಂಪಾನಿಯೋ ಪ್ರವರ್ತಕ ಸೀತಾರಾಮ್ ಶೆಟ್ಟಿ, ಉಪಸ್ಥಿತರಿದ್ದರು. ಶಿಬಿರಾಥಿಗಳು ಅನಿಸಿಕೆಯನ್ನು ವ್ಯಕ್ತಪಡಿಸಿದರು. ಕಂಪಾನಿಯೋ ವೆಲ್ನೇಸ್ ಸೆಂಟರ್ ಮುಖ್ಯಸ್ಥ ಪ್ರಭಾಕರ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿ, ನೀಲಕಂಠ ಶೆಟ್ಟಿ ಸ್ವಾಗತಿಸಿ, ವಂದಿಸಿದರು.