ಪುತ್ತೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಸರಕಾರ 7 ದಿನಗಳ ಶೋಕಾಚರಣೆ ಘೋಷಿಸಿದ್ದು ಆ ಕಾರಣದಿಂದ ಡಿ.31ರಂದು ನಿಗದಿಯಾಗಿದ್ದ ಮುಂಡೂರು ಸರಕಾರಿ ಉ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವವನ್ನು ಮುಂದೂಡಲಾಗಿದ್ದು, ಜ.5ರಂದು ನಡೆಸುವುದೆಂದು ತೀರ್ಮಾನಿಸಲಾಗಿದೆ ಎಂದು ಮುಂಡೂರು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣು ತಿಳಿಸಿದ್ದಾರೆ.