ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ 2024-25ನೇ ಸಾಲಿನ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆಯು ಡಿ.30 ರಂದು ಬೆಳಿಗ್ಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕುಂಬ್ರದಲ್ಲಿ ನಡೆಯಲಿದೆ.
ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ರವರ ಅಧ್ಯಕ್ಷತೆಯಲ್ಲಿ ನಡೆಯುವ ಮಕ್ಕಳ ಗ್ರಾಮಸಭೆಯಲ್ಲಿ ಪಡಿ ಸಂಸ್ಥೆ ಮಂಗಳೂರು ಇದರ ಸಂಯೋಜಕರಾದ ಕಸ್ತೂರಿ ಬೊಳುವಾರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಲಿದ್ದಾರೆ. ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಜೊತೆಯಲ್ಲಿ ಮಕ್ಕಳ ಅಭಿಪ್ರಾಯ, ಆಲೋಚನೆಗಳನ್ನು ಸಂಗ್ರಹಿಸಿ ಪರಿಹಾರ ಕಂಡುಕೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು. ಗ್ರಾಮಸ್ಥರು, ಮಕ್ಕಳ ಪೋಷಕರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ನೀಡುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಮನ್ಮಥ ಅಜಿರಂಗಳ, ಕಾರ್ಯದರ್ಶಿ ಜಯಂತಿ ಕೆ ಹಾಗೂ ಸರ್ವ ಸದಸ್ಯರುಗಳ, ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.