ಪುತ್ತೂರು: ಲಯನ್ಸ್ ಮತ್ತು ಲಿಯೋ ಕ್ಲಬ್ ಪುತ್ತೂರ್ದ ಮುತ್ತು, ಶ್ರೀರಾಮಕೃಷ್ಣ ಪ್ರೌಢಶಾಲೆಯ ಸಹಯೋಗದೊಂದಿಗೆ ಎಂ ಸುಂದರ್ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ್ ಶೆಟ್ಟಿಯವರು, ಜವಾಬ್ದಾರಿಯುತ ಪ್ರಜೆಗಳಾಗಿ ಸಂವಿಧಾನವನ್ನು ಅನುಸರಿಸುತ್ತಾ ಕಾನೂನು ಪಾಲನೆ ಮಾಡಬೇಕಾಗಿರುವುದು ನಮ್ಮ ಜವಾಬ್ದಾರಿ. ಆ ನಿಟ್ಟಿನಲ್ಲಿ ರಸ್ತೆ ಸುರಕ್ಷತೆ ಬಗ್ಗೆ ತಿಳಿದುಕೊಂಡು ಕಾನೂನು ಪಾಲನೆ ಮಾಡಿ ನಮ್ಮ ಜೀವಕ್ಕೆ ಬೆಲೆ ಕೊಟ್ಟು ಜೀವನವನ್ನು ಉತ್ತಮಗೊಳಿಸೋಣ ಎಂದು ಹೇಳಿದರು.
ಪುತ್ತೂರು ಸಂಚಾರಿ ಠಾಣೆಯ ಪಿ.ಎಸ್.ಐ ಕುಟ್ಟಿ ಎಂ ಮತ್ತು ಹೆಡ್ ಕಾನ್ಸ್ಟೇಬಲ್ ದಿನೇಶ್ ಕಡಮಜಲು ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮ ಪಾಲನೆ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಲಯನ್ಸ್ ಪುತ್ತೂರ್ದ ಮುತ್ತು ಕೋಶಾಧಿಕಾರಿ ವತ್ಸಲಾ ಪದ್ಮನಾಭ ಶೆಟ್ಟಿ, ಕಾರ್ಯಕ್ರಮ ವ್ಯವಸ್ಥಾಪಕರಾದ ರಂಜಿನಿ ಶೆಟ್ಟಿ, ಗೈಡಿಂಗ್ ಲಯನ್ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ಸಂದರ್ಭೋಚಿತವಾಗಿ ಮಾತನಾಡಿದರು. ಕ್ಲಬ್ ನ ಅಧ್ಯಕ್ಷೆ ವೇದಾವತಿ ಎ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಭಾಗ್ಯೇಶ್ ರೈ ವಂದಿಸಿದರು. ರವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.