ಪುತ್ತೂರು: ಡಿ.28ರಂದು ಬೆಳ್ಳಂಬೆಳಗ್ಗೆ ಕಾರೊಂದು ರಸ್ತೆ ಬದಿಯ ಪ್ರಪಾತಕ್ಕೆ ಬಿದ್ದು, ಕಾರಿನಲ್ಲಿದ್ದ ಸುಳ್ಯ ಜಟ್ಟಿಪಳ್ಳ ಮೂಲದ ಚಾಲಕ ಸಹಿತ ಮೂವರು ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆ ಪರ್ಲಡ್ಕ ಸಮೀಪ ನಡೆದಿದ್ದು, ಸ್ಥಳಕ್ಕೆ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್., ಐ.ಪಿ.ಎಸ್ ರವರು ಭೇಟಿ ನೀಡಿದರು.
ಘಟನಾ ಸ್ಥಳವನ್ನು ಪರಿಶೀಲಿಸಿ, ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.