ಉಡುಪಿಯಲ್ಲಿ ಗೀತೋತ್ಸವ ಕಾರ್ಯಕ್ರಮ – ರಾಮಕುಂಜ ಆ.ಮಾ.ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸಂದೇಶ ನೃತ್ಯ ರೂಪಕ

0

ರಾಮಕುಂಜ: ಇಲ್ಲಿನ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಡಿ.27ರಂದು ಉಡುಪಿಯ ರಾಜಾಂಗಣ ವೇದಿಕೆಯಲ್ಲಿ ನಡೆದ ವಿಶ್ವಗೀತಾ ಪರ್ಯಾಯದ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ’ಶ್ರೀ ಕೃಷ್ಣ ಮಹಾನಂದಮ್’ ಎಂಬ ಭಗವದ್ಗೀತೆ ಸಂದೇಶ ನೃತ್ಯ ರೂಪಕಗಳನ್ನು ಪ್ರದರ್ಶಿಸಿದರು.


ಗೀತೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ 50 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಶ್ರೀ ಕೃಷ್ಣನ ಕೀರ್ತನೆಗಳನ್ನು ಭಜಿಸಿದರು. ಬಳಿಕ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ದೇವರ ದರ್ಶನ ಪಡೆದರು. ಪರ್ಯಾಯ ಪೀಠಾಧಿಪತಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ವಿದ್ಯಾರ್ಥಿಗಳಿಗೆ ಮಂತ್ರಾಕ್ಷತೆ ನೀಡಿ ಹರಸಿದರು. ವಿದ್ಯಾರ್ಥಿಗಳು ಭಗವದ್ಗೀತೆಯನ್ನು ದೇವಾಲಯದ ಆವರಣದ ಮಂಟಪದಲ್ಲಿ ಪಠಿಸಿದರು.


ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ದಂಪತಿ, ಪ್ರೌಢಶಾಲಾ ಮುಖ್ಯಗುರು ಗಾಯತ್ರಿ ಯು.ಎನ್, ಶಿಕ್ಷಕರಾದ ಸರಿತಾ ಜನಾರ್ದನ್, ಕಿಶೋರ್ ಕುಮಾರ್ ಬಿ, ದಿವ್ಯ, ಸುಜಿತಾ, ಸುಜಾ, ಪ್ರಖ್ಯಾತ್ ಆಳ್ವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸಂಸ್ಥೆಯ ಆಡಳಿತಾಧಿಕಾರಿ, ವ್ಯವಸ್ಥಾಪಕರು, ಪ್ರಾಥಮಿಕ ಶಾಲಾ ಮುಖ್ಯಗುರು, ಶಿಕ್ಷಕ- ಶಿಕ್ಷಕೇತರ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here