ಡಿ.31: ಮರೀಲು ಸ್ನೇಹನಗರದಲ್ಲಿ 23ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ 

0

ಪುತ್ತೂರು: ಮರೀಲು ಸ್ನೇಹನಗರ ಇಲ್ಲಿನ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ಡಿ.31ರಂದು ಸಂಜೆ ಮರೀಲು ಸ್ನೇಹನಗರದ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆಯಲ್ಲಿ ಜರಗಲಿರುವುದು.

ಸಂಜೆ ಸ್ನೇಹನಗರ ಶ್ರೀ ಮಹಾಲಿಂಗೇಶ್ವರ ಕಟ್ಟೆ ಸಮಿತಿ ಗೌರವ ಸಲಹೆಗಾರರಾದ ಭಾಸ್ಕರ ಎಂ.ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಕೆಮ್ಮಿಂಜೆ ಶ್ರೀರಾಮ ಮಹಿಳಾ ಭಜನಾ ಮಂಡಳಿಯಿಂದ ಭಜನೆ, ಮಹಾಪೂಜೆ, ಅನ್ನಸಂತರ್ಪಣೆ ಜರಗಲಿದೆ. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತೂರು ಶಾರದಾ ಭಜನಾ ಮಂದಿರದ ಗೌರವಾಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು, ನಗರಸಭೆ ಸದಸ್ಯೆಯರಾದ ರೋಹಿಣಿ, ಮಮತಾ ರಂಜನ್ ರವರು ಭಾಗವಹಿಸಲಿದ್ದಾರೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಪ್ರಶಾಂತ್ ಕೆ, ಗೌರವಾಧ್ಯಕ್ಷ ರಾಜೇಂದ್ರ ಕೆ.ಮೆಸ್ಕಾಂ, ಕಾರ್ಯದರ್ಶಿ ಅರುಣ್ ಕ್ಯಾಂಪ್ಕೋ, ಕೋಶಾಧಿಕಾರಿ ಹರೀಶ್ ರೈ ಹಾಗೂ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯ ಮಕ್ಕಳಿಂದ ನೃತ್ಯ, ಬಳಿಕ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾದಗಾನ ಕೌಸ್ತುಭ ಗಾಯಕ ಪುತ್ತೂರು ಚಂದ್ರಶೇಖರ್ ಹೆಗ್ಡೆ ನಿರ್ದೇಶನದ ಪುನೀತ್ ಆರ್ಕೇಸ್ಟ್ರಾ ಪುತ್ತೂರು ಇವರಿಂದ ಸಂಗೀತ ರಸಮಂಜರಿ ನಡೆಯಲಿದೆ.

ಪುತ್ತೂರು ನಗರಸಭೆಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಾಲಚಂದ್ರ ಕೆ ಇವರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here