ಮಾದಕ ವಸ್ತು ಸೇವನೆ-ಹಾರಾಡಿ ನಿವಾಸಿ ವಿರುದ್ಧ ಪ್ರಕರಣ ದಾಖಲು

0

ಪುತ್ತೂರು: ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ವ್ಯಕ್ತಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಾರಾಡಿ ಶಾಲೆ ಸಮೀಪದ ನಿವಾಸಿ ಅಬ್ದುಲ್ ರಹಿಮಾನ್ ಯಾನೆ ರಹೀಂ (42ವ.) ಬಂಧಿತ ಆರೋಪಿ. ರೌಂಡ್ಸ್ ಕರ್ತವ್ಯದಲ್ಲಿರುವ ಸಂದರ್ಭದಲ್ಲಿ ಬನ್ನೂರು ಗ್ರಾಮದ ಪಡೀಲ್‌ನ ಸಾರ್ವಜನಿಕ ಸ್ಥಳದಲ್ಲಿ ಈತ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ನಿಷೇಧಿತ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here