ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವವು ಡಿ.24ರಿಂದ ಡಿ.28ರ ವರೆಗೆ ನಡೆಯಿತು.
ಡಿ.24ರಂದು ಹೊರೆ ಕಾಣಿಕೆ ನಡೆದು, ಸಂಜೆ ಗಂಟೆ 5ರಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶವತರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ‘ಸಂಪೂರ್ಣ ಶ್ರೀ ದೇವಿ ಮಹಾತ್ಮೆ’ ನಡೆಯಿತು.
ಡಿ.25ರಂದು ಸಂಜೆ ಭಜನಾ ಮಂಗಳೋತ್ಸವ, ಹಿರಿಯ ಭಜಕರಿಗೆ ಗೌರವಾರ್ಪಣೆ, ಭಜಕರಿಗೆ ಹಾಗೂ ಬೈಲುವಾರು ಸಂಚಾಲಕರಿಗೆ ಗೌರವಾರ್ಪಣೆ, ಭಜನಾ ಸಂಕೀರ್ತನೆ ಹಾಗೂ ಊರ ಪ್ರತಿಭೆಗಳಿಂದ ಸಾಂಸ್ಕೃತಿಕ ವೈಭವ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಡಿ.26ರಂದು ಬೆಳಿಗ್ಗೆ ಗಂಟೆ 8-30ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಗಣಪತಿಹೋಮ, ಕಲಶಪೂಜೆ, ಕಲಶಾಭಿಷೇಕ ನಡೆಯಲಿದ್ದು ಮದ್ಯಾಹ್ಯ ಗಂಟೆ 12ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ರಾತ್ರಿ ಗಂಟೆ 8-೦೦ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ಕಟ್ಟೆಪೂಜೆ, ಬಟ್ಟಲು ಕಾಣಿಕೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಡಿ.27ರಂದು ಬೆಳಿಗ್ಗೆ ಗಂಟೆ 9-೦೦ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ಕಟ್ಟೆಪೂಜೆ, ಬಟ್ಟಲು ಕಾಣಿಕೆ, ದರ್ಶನ ಬಲಿ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಸಂಜೆ ಗಂಟೆ 6-೦೦ರಿಂದ ದೈವಗಳ ಭಂಡಾರ ತೆಗೆಯುವುದು, ರಾತ್ರಿ ಗಂಟೆ 7-30ಕ್ಕೆ ರಂಗಪೂಜೆ ಮಂತ್ರಾಕ್ಷತೆ, ರಾತ್ರಿ ಗಂಟೆ 8:30ಕ್ಕೆ ನೇಮೋತ್ಸವ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಡಿ.28ರಂದು ಬೆಳಿಗ್ಗೆ ಸಂಪ್ರೋಕ್ಷಣೆ, ಕಲಶಾಭಿಷೇಕ, ಮದ್ಯಾಹ್ನ ಗಂಟೆ 12-೦೦ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಅರ್ಚಕ ಶ್ರೀರಾಮ ಕಲ್ಲೂರಾಯರಿಗೆ ಸನ್ಮಾನ:
ಕಳೆದ 45 ವರ್ಷಗಳಿಂದ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀರಾಮ ಕಲ್ಲೂರಾಯ ಅವರನ್ನು ದೇವಸ್ಥಾನದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಜಾತ್ರೋತ್ಸವ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಪ್ರಸಾದ್ ರೈ ಸೊರಕೆ, ಗೌರವಾಧ್ಯಕ್ಷರಾದ ಮೋಹನ್ ರೈ ಓಲೆಮುಂಡೋವು, ಸಂಚಾಲಕರಾದ ವಿಜಯ ಕುಮಾರ್ ರೈ, ಜಾತ್ರೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಆನಂದ ಪೂಜಾರಿ ಸರ್ವೆದೋಳಗುತ್ತು, ಕಾರ್ಯಾಧ್ಯಕ್ಷ ಲೋಕೇಶ್ ಗೌಡ ತಂಬುತ್ತಡ್ಕ ಹಾಗೂ ಪದಾಧಿಕಾರಿಗಳು, ಭಕ್ತಾದಿಗಳು ವಿವಿಧ ಸಹಕಾರ ನೀಡಿದರು. ಜಾತ್ರೋತ್ಸವಕ್ಕೆ ಸಾವಿರಾರು ಮಂದಿ ಭಕ್ತರು ಭಾಗವಹಿಸಿದ್ದರು.