ಪುತ್ತೂರು: 2025 ಫೆ. 7 ಮತ್ತು 8 ರಂದು ನಡೆಯಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಜ.2 ರಂದು ಬೆಳಿಗ್ಗೆ 6 ಗಂಟೆಗೆ ದೇವಾಲಯದಲ್ಲಿ ಜರಗಲಿದ್ದು, ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತದಾರ ಸವಣೂರುಗುತ್ತು ರತ್ನಾಕರ ಶೆಟ್ಟಿ ಮತ್ತು ಕುಟುಂಬಸ್ಥರು, ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ, ಜಾತ್ರೋತ್ಸವ ಸಮಿತಿಯ ಕಾರ್ಯದರ್ಶಿ ಬೆಳಿಯಪ್ಪ ಗೌಡ ಚೌಕಿಮಠ, ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ ಹಾಗೂ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ ಸುಣ್ಣಾಜೆ ತಿಳಿಸಿದ್ದಾರೆ.