ವಿಟ್ಲ: ಪಟ್ಟಣ ಪಂಚಾಯತ್ ವ್ಯಾಪ್ತಿಯ ಒಕ್ಕೆತ್ತೂರು ಸೇತುವೆ ಬಳಿ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರಿಗೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕರುಣಾಕರ ವಿ. ರವರು ದಂಡ ವಿಧಿಸಿ, ನೊಟೀಸು ಜಾರಿ ಮಾಡಿದ್ದಾರೆ.
ಕಳೆದ ಕೆಲದಿನಗಳಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯ ಒಕ್ಕೆತ್ತೂರು ಸೇತುವೆಯ ಸಮೀಪ ಕಸ ಎಸೆಯಲಾಗಿತ್ತು. ಈ ಬಗ್ಗೆ ಸಾರ್ವಜನಿಕರು ಪಟ್ಟಣ ಪಂಚಾಯತ್ ಗೆ ದೂರು ನೀಡಿದ್ದರು. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡ ಪಟ್ಟಣ ಪಂಚಾಯತ್ ನ ಆರೋಗ್ಯ ವಿಭಾಗದ ಸಿಬ್ಬಂದಿಗಳಾ ಲ್ಯಾನ್ಸಿ ಬ್ರಿಯಾನ್ , ಚೇತನ್ ಹಾಗೂ ಪೌರನೌಕರಾದ ರವರು ತ್ಯಾಜ್ಯ ಎಸೆದಿರುವ ವೀರಕಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ ವ್ಯಕ್ತಿಯೋರ್ವರನ್ನು ಪತ್ತೆ ಹಚ್ಚಿ, ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕರುಣಾಕರ ವಿ. ರವರಿಗೆ ಮಾಹಿತಿ ನೀಡಿದ್ದಾರೆ. ಅವರು ತ್ಯಾಜ್ಯ ಹಾಕಿದವರಿಗೆ 5೦೦೦ ರೂ. ದಂಡ ವಿಧಿಸಿ ನೋಟಿಸ್ ಜಾರಿ ಮಾಡಿದ್ದಾರೆ. ಇನ್ನು ಮುಂದೆ ರಸ್ತೆ ಬದಿಯಲ್ಲಿ ತ್ಯಾಜ್ಯ ಹಾಕಿದವರಿಗೆ ಹೆಚ್ಚಿನ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ವಿಂಗಡಣೆ ಮಾಡಿ ಕಡ್ಡಾಯವಾಗಿ ತ್ಯಾಜ್ಯ ಸಂಗ್ರಾಹಕರಿಗೆ ನೀಡಿ ಸಹಕರಿಸಬೇಕು. ಅದೇ ರೀತಿ ಎಲ್ಲೊಂದರಲ್ಲಿ ಕಸ ಎಸೆಯುವುದು ಕಂಡು ಬಂದಲ್ಲಿ ಅಂತವರನ್ನು ಪತ್ತೆ ಹಚ್ಚಿ ದಂಡವಿಧಿಸಲಾಗುವುದು, ಈ ಬಗ್ಗೆ ಸಾರ್ವಜನಿಕರು ಸಹಕರಿಸುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕರುಣಾಕರ ವಿ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.