ರಾಮಕುಂಜ: ಡಿ.8ರಂದು ಪುತ್ತೂರಿನ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಲ್ಲಿ ಬೆಂಗಳೂರಿನ ಅಬಾಕಸ್ ಸಂಸ್ಥೆ ಏರ್ಪಡಿಸಿದ್ದ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ಸುಮಾರು 75 ವಿದ್ಯಾರ್ಥಿಗಳು ಪ್ರಶಸ್ತಿ ವಿಜೇತರಾಗಿದ್ದು ಈ ವಿದ್ಯಾರ್ಥಿಗಳಿಗೆ ಡಿ.28ರಂದು ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಬಹುಮಾನ ವಿತರಣೆ ಮಾಡಲಾಯಿತು.
ಶಾಲೆಯ ಆಡಳಿತ ಮಂಡಳಿಯ ಸದಸ್ಯರಾದ ಎಂ.ಸತೀಶ್ ಭಟ್, ಬಾಲಚಂದ್ರ ಮುಚ್ಚಿಂತ್ತಾಯ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಸುಲೈಮಾನ್, ಚೈತ್ರಾ, ಶಾಲೆಯ ಪ್ರಾಂಶುಪಾಲ ಪ್ರವೀಧ್ ಪಿ., ಉಪಸ್ಥಿತರಿದ್ದರು. ಅನುಶ್ರೀ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಜಿನಿ, ಪಾರ್ವತಿ ಅವರು ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಶಾಲೆಯ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಸಹಕರಿಸಿದರು.