ಹೊಸ ವರ್ಷಕ್ಕೆ ಶುಭಾಶಯ ನೆಪದಲ್ಲಿ ಆನ್‌ಲೈನ್ ವಂಚನೆ ಸಾಧ್ಯತೆ- ಮಂಗಳೂರು ಪೊಲೀಸರ ಎಚ್ಚರಿಕೆ

0

ಮಂಗಳೂರು: 2024 ಇನ್ನೇನು ಕೊನೆಗೊಳ್ಳುತ್ತಿದ್ದು, 2025ರ ಸ್ವಾಗತಕ್ಕೆ ಸಿದ್ಧತೆಗಳು ನಡೆಯುತ್ತಿದೆ. ಈ ಮಧ್ಯೆ ಹೊಸ ವರ್ಷದ ಶುಭಾಶಯ ಕೋರುವ ನೆಪದಲ್ಲಿ ಸೈಬರ್ ವಂಚಕರು ವಂಚಿಸುವ ಸಾಧ್ಯತೆ ಇದ್ದು ಎಚ್ಚರಿಕೆಯಿಂದ ಇರಬೇಕೆಂದು ಮಂಗಳೂರು ಪೊಲೀಸರು ಮನವಿ ಮಾಡಿದ್ದಾರೆ.


2025ನೇ ಹೊಸ ವರ್ಷಕ್ಕೆ ಶುಭಾಶಯವನ್ನು ಕೋರುವ ಲಿಂಕ್‌ಗಳನ್ನು ಎಪಿಕೆ -ಫೈಲ್ ಗಳಲ್ಲಿ ಮೊಬೈಲ್‌ಗೆ ಕಳುಹಿಸಿ ಮೊಬೈಲ್‌ನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆ.ಮೊಬೈಲ್ ಹ್ಯಾಕ್ ಮಾಡಿದ ನಂತರ ಆ ಮೊಬೈಲ್‌ನಿಂದ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು ಎಪಿಕೆ -ಫೈಲ್ ಗಳನ್ನು ದೊಡ್ಡ ಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಎಪಿಕೆ -ಫೈಲ್ ಗಳನ್ನು ವಾಟ್ಸಪ್ ಸಹಿತ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡರೆ ಅದನ್ನು ಕೂಡಲೇ ಡಿಲೀಟ್ ಮಾಡಬೇಕು.

ಒಂದು ವೇಳೆ ಅಂತಹ ಎಪಿಕೆ -ಫೈಲ್ ಗಳನ್ನು ಯಾವುದೇ ವಾಟ್ಸಪ್ ಗ್ರೂಪ್‌ಗಳಿಗೆ ಪರಿಚಿತ ವಾಟ್ಸಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದ್ದರೆ ಅಂತಹ ಗ್ರೂಪ್‌ನ ಅಡ್ಮಿನ್‌ಗಳು -ಫೈಲ್ ಗಳನ್ನು ಡಿಲೀಟ್ ಮಾಡಬೇಕು. ಯಾವುದೇ ಸೈಬರ್ ಅಪರಾಧಕ್ಕೆ ಒಳಗಾದರೆ ಕೂಡಲೇ 1930ಗೆ ಕರೆ ಮಾಡಬೇಕು ಅಥವಾ www.cybercrime.gov.in ನಲ್ಲಿ ದೂರು ಸಲ್ಲಿಸುವಂತೆ ಪೊಲೀಸರು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here