ಬಡಗನ್ನೂರು: ಶ್ರೀ ಕ್ಷೇತ್ರ ಪಡುಮಲೆಯ ವರ್ಷಾವಧಿ ಜಾತ್ರೋತ್ಸವವು ಜ. 12 ರಿಂದ 14 ನಡೆಯಲಿದ್ದು ಜಾತ್ರೋತ್ಸವದ ಗೊನೆ ಮುಹೂರ್ತ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ. 2 ನಡೆಯಲಿದೆ.
ಜ.2 ರಂದು ಬೆಳಗ್ಗೆ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಶಂಖ ಜಾಗಟೆ ವಾದ್ಯದೊಂದಿಗೆ ತೆರಳ ಗೊನೆ ಮುಹೂರ್ತ ನಡೆಯಲಿದೆ.
ಬಳಿಕ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ನಡೆದು, ಆ ಬಳಿಕ ಆಮಂತ್ರಣ ಪತ್ರಿಕೆ ವಿತರಣೆಯ ಬಗ್ಗೆ ಭಕ್ತಾದಿಗಳ ವಿಚಾರ ವಿನಿಮಯ ಪೂರ್ವಭಾವಿ ಸಭೆ ನಡೆಯಲಿರುವುದು ಎಂದು ದೇವಸ್ಥಾನದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು ಮತ್ತು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸತೀಶ್ ರೈ ಕಟ್ಟಾವು ಹಾಗೂ ಸಮಿತಿ ಪದಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.