ಪುತ್ತೂರು : ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಡಿಸೆಂಬರ್ 28 ರಂದು 7, 8 ಮತ್ತು 9ನೇ ತರಗತಿಗಳ ಮಕ್ಕಳಿಗೆ “ಶಾಲಾ ವರ್ಷಗಳಲ್ಲಿ ಸ್ವಯಂ ಆರೋಗ್ಯ ರಕ್ಷಣೆ ” ಎಂಬ ವಿಷಯದ ಕುರಿತು ‘ಚೇತನ’ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿ ಖ್ಯಾತ ಮಕ್ಕಳ ತಜ್ಞೆ ಡಾ. ತನ್ವಿ ಸುರೇಂದ್ರ ಪೈ ಮೊಬೈಲ್ ಹಾಗೂ ಇನ್ನಿತರ ಮಾಧ್ಯಮಗಳ ಮೂಲಕ ಮಕ್ಕಳು ತಮ್ಮ ಹೆಚ್ಚಿನ ಸಮಯವನ್ನು ಕಳೆಯುತ್ತಾರೆ. ಇದು ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ಅದನ್ನು ಬಿಟ್ಟು, ಪುಸ್ತಕಗಳನ್ನು ಓದುವುದು ಹಾಗೂ ದೈಹಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.ಸಾಮಾಜಿಕ ಜಾಲತಾಣಗಳ ಉಪಯೋಗ ಮತ್ತು ದುರುಪಯೋಗ, ಮನೆಯಲ್ಲಿ ತಯಾರಿಸಿದ ಪೌಷ್ಟಿಕ ಆಹಾರವನ್ನು ಸೇವಿಸುವುದರೊಂದಿಗೆ ಜಂಕ್ ಫುಡ್ ಗಳಂತಹ ಅನಾರೋಗ್ಯಕರ ಆಹಾರಗಳನ್ನು ಸೇವಿಸಬಾರದು ಎಂದು ಮಕ್ಕಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಸಿಂಧು ವಿ. ಜಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಾಲಾ ಶಿಕ್ಷಕಿ ದೇವಿ ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಶಿಕ್ಷಕಿ ರಶ್ಮಿತ ಆರ್ ವಂದಿಸಿದರು.